ADVERTISEMENT

ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಶೀಘ್ರ ಅನುಮೋದನೆ: ಕೇಂದ್ರ ಸರ್ಕಾರ

ಸುಪ್ರೀಂಕೋರ್ಟ್‌ ಕೊಲಿಜಿಯಂನಿಂದ ಶಿಫಾರಸು

ಪಿಟಿಐ
Published 3 ಫೆಬ್ರುವರಿ 2023, 11:24 IST
Last Updated 3 ಫೆಬ್ರುವರಿ 2023, 11:24 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ಸುಪ್ರೀಂಕೋರ್ಟ್‌ಗೆ ನೇಮಕಕ್ಕಾಗಿ ಐವರು ನ್ಯಾಯಮೂರ್ತಿಗಳ ಹೆಸರುಗಳನ್ನು ಕೊಲಿಜಿಯಂ ಶಿಫಾರಸು ಮಾಡಿದ್ದು, ಈ ನೇಮಕಾತಿಗೆ ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ.

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಎಸ್‌.ಕೆ.ಕೌಲ್‌ ಹಾಗೂ ಎ.ಎಸ್‌.ಓಕಾ ಅವರಿದ್ದ ನ್ಯಾಯಪೀಠಕ್ಕೆ ಅಟಾರ್ನಿ ಜನರಲ್ ಆರ್‌.ವೆಂಕಟರಮಣಿ ಈ ವಿಷಯ ತಿಳಿಸಿದರು.

ವಿಚಾರಣೆ ವೇಳೆ ಈ ವಿಷಯ ಕುರಿತು ಪ್ರಸ್ತಾಪಿಸಿದ ನ್ಯಾಯಪೀಠ, ಶಿಫಾರಸು ಮಾಡಿರುವ ನ್ಯಾಯಮೂರ್ತಿಗಳ ಹೆಸರುಗಳಿಗೆ ಅನುಮೋದನೆ ನೀಡುವಲ್ಲಿ ಆಗುತ್ತಿರುವ ವಿಳಂಬಕ್ಕೆ ಅಸಮಾಧಾನ ವ್ಯಕ್ತಪಡಿಸಿತು.

ADVERTISEMENT

‘ಇದು ಬಹಳ ಗಂಭೀರ ವಿಷಯ. ಈ ಕುರಿತು ನಾವು ಅಹಿತಕರ ನಿಲುವು ತೆಗೆದುಕೊಳ್ಳುವಂತಹ ಪರಿಸ್ಥಿತಿ ತರಬೇಡಿ’ ಎಂದು ಹೇಳಿದ ನ್ಯಾಯಪೀಠ, ವಿಚಾರಣೆಯನ್ನು ಫೆ.13ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.