ADVERTISEMENT

ಕಾಲುವೆಗೆ ವಾಹನ ಬಿದ್ದು ಐವರು ಮಹಿಳೆಯರು ಸಾವು

ಮೂವತ್ತು ಮಂದಿಗೆ ಗಾಯ

ಪಿಟಿಐ
Published 16 ಫೆಬ್ರುವರಿ 2021, 8:02 IST
Last Updated 16 ಫೆಬ್ರುವರಿ 2021, 8:02 IST

ತೂತುಕುಡಿ (ತಮಿಳುನಾಡು): ಇಲ್ಲಿಗೆ ಸಮೀಪದ ಮನಿಯಾಚಿ ಎಂಬಲ್ಲಿ ಮಂಗಳವಾರ ಮಹಿಳಾ ಕಾರ್ಮಿಕರನ್ನು ಕೆಲಸಕ್ಕೆ ಕರೆದೊಯ್ಯುತ್ತಿದ್ದ ವಾಹನವೊಂದು ರಸ್ತೆ ಬದಿಯ ಕಾಲುವೆಗೆ ಉರುಳಿದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ, 30 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಪಕ್ಕದಲ್ಲಿದ್ದ ಸಣ್ಣ ಕಾಲುವೆಗೆ ಉರುಳಿತು. ಘಟನೆಯಲ್ಲಿ ಗಾಯಗೊಂಡವರನ್ನು ಇಲ್ಲಿನಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT