ಛತರ್‌ಪುರ: ಮಧ್ಯಪ್ರದೇಶದ ಛತರ್‌ಪುರ ಜಿಲ್ಲೆಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪದಡಿ ವಿನೋದ್ ಅಹಿರ್ವಾರ್ ಅವರನ್ನು ಬಂಧಿಸಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದರು.
ಜಿಲ್ಲೆಯ ಹರಪಾಲ್‌ಪುರ ಗ್ರಾಮದಲ್ಲಿ 25 ವರ್ಷದ ಯುವಕ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಸಮಾರಂಭವೊಂದಕ್ಕೆ ತೆರಳುತ್ತಿದ್ದ ಬಾಲಕಿಗೆ ಚಾಕಲೇಟ್ ನೀಡುವ ಆಮಿಷವೊಡ್ಡಿ ಯುವಕ ಕೋಣೆಯೊಂದಕ್ಕೆ ಕರೆದುಕೊಂಡು ಹೋಗಿದ್ದ. ಬಾಲಕಿಗಾಗಿ ನಾವು ಹುಡುಕಾಟ ನಡೆಸುತ್ತಿದ್ದ ವೇಳೆ ಇನ್ನೊಂದು ಮಗುವು ಈ ಬಗ್ಗೆ ನಮಗೆ ಮಾಹಿತಿ ನೀಡಿತು. ಕೂಡಲೇ ಸ್ಥಳಕ್ಕೆ ತೆರಳಿ ಬಾಲಕಿಯನ್ನು ರಕ್ಷಿಸಿದೆವು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.