ಸಾವು (ಪ್ರಾತಿನಿಧಿಕ ಚಿತ್ರ)
ಸೀತಾಪುರ: ಉತ್ತರ ಪ್ರದೇಶದ ಮಥುರಾದ ಪೊಲೀಸ್ ಠಾಣೆ ಬಳಿ ಮೈದಾನದಲ್ಲಿ 5 ವರ್ಷದ ಬಾಲಕಿಯ ದೇಹದ ಭಾಗಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಫೆ.25ರಂದು ಬಾಲಕಿ ನಾಪತ್ತೆಯಾಗಿದ್ದಳು. ಫೆ.26ರಂದು ಗದ್ದೆಯೊಂದರಲ್ಲಿ ಬಾಲಕಿಯ ಕಾಲು ಪತ್ತೆಯಾಗಿತ್ತು. ಆರಂಭದಲ್ಲಿ ಕಾಡು ಪ್ರಾಣಿ ದಾಳಿ ನಡೆಸಿರಬಹುದೆಂದು ಶಂಕಿಸಲಾಗಿತ್ತು. ದೇಹದ ಇತರ ಭಾಗಗಳ ಪತ್ತೆಗೆ ಡ್ರೋನ್ ಕಣ್ಗಾವಲು ಮೂಲಕ ಶೋಧ ನಡೆಸಿದಾಗ ಮತ್ತೊಂದು ತುಂಡಾದ ಕಾಲು ಮತ್ತು ಮುಂಡ ದೊರಕಿದೆ. ವಿಧಿವಿಜ್ಞಾನ ತಂಡ ಮಾದರಿಗಳನ್ನು ಸಂಗ್ರಹಿಸಿವೆ. ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವೇಳೆ ಬಾಲಕಿಯನ್ನು ಕತ್ತು ಹಿಸುಕಿ ಸಾಯಿಸಿರುವುದು ಗೊತ್ತಾಗಿದೆ ಎಂದು ಸೀತಾಪುರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ರಂಜನ್ ಹೇಳಿದ್ದಾರೆ.
ಘಟನೆಯ ಕುರಿತು ಹಲವು ಶಂಕಿತರನ್ನು ವಿಚಾರಣೆ ನಡೆಸಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆಗೆ ಕಣ್ಗಾವಲು ತಂಡ ನಿಯೋಜಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಸ್ಥಳೀಯ ಬಿಜೆಪಿ ಶಾಸಕ ಜ್ಞಾನ್ ತಿವಾರಿ ಮತ್ತು ರಾಜ್ಯ ಮಹಿಳಾ ಆಯೋಗದ ಸದಸ್ಯೆ ಪ್ರಿಯಾಂಕಾ ಮೌರ್ಯ, ಮೃತ ಬಾಲಕಿಯ ಕುಟುಂಬವನ್ನು ಭೇಟಿ ಮಾಡಿ ಅಪರಾಧಕ್ಕೆ ಕಾರಣರಾದವರ ವಿರುದ್ಧ ತ್ವರಿತ ಮತ್ತು ಕಠಿಣ ಕ್ರಮದ ಭರವಸೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.