ಸಾಂದರ್ಭಿಕ ಚಿತ್ರ
ಮೌ (ಉತ್ತರ ಪ್ರದೇಶ): ಟ್ಯೂಷನ್‌ಗೆ (ಮನೆಪಾಠ) ಹೋಗಿದ್ದ ಐದು ವರ್ಷದ ಬಾಲಕಿ ಮೇಲೆ ಆಕೆಯ ಶಿಕ್ಷಕನೇ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಮೌ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.
ಬಾಲಕಿ ಮಂಗಳವಾರ ಸಂಜೆ ಖಾಸಗಿ ಶಿಕ್ಷಕನ ಮನೆಗೆ ಟ್ಯೂಷನ್‌ಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಬಾಲಕಿ ಒಂಟಿಯಾಗಿರುವುದನ್ನು ಕಂಡು ಶಿಕ್ಷಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಕುರಿತು ಸಂತ್ರಸ್ತೆಯ ತಂದೆ ದೂರು ದಾಖಲಿಸಿದ್ದಾರೆ. ಬಾಲಕಿಯ ಆರೋಗ್ಯ ಹದಗೆಡಲು ಆರಂಭಿಸಿದಾಗ ಆಕೆ ತನ್ನ ತಾಯಿಯ ಬಳಿ ಘಟನೆಯ ಬಗ್ಗೆ ತಿಳಿಸಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ಕುರಿತು ತನಿಖೆ ನಡೆಸಲಾಗುತ್ತಿದೆ. ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.