ADVERTISEMENT

ಜಮ್ಮುವಿನಲ್ಲಿ ಹಠಾತ್ ಪ್ರವಾಹದಲ್ಲಿ ಕೊಚ್ಚಿ ಹೋದ ಇಬ್ಬರು ಯೋಧರ ಮೃತದೇಹ ಪತ್ತೆ

ಪಿಟಿಐ
Published 9 ಜುಲೈ 2023, 9:08 IST
Last Updated 9 ಜುಲೈ 2023, 9:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಹಠಾತ್ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಇಬ್ಬರು ಯೋಧರ ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿದಂತೆ ಇಬ್ಬರು ಯೋಧರು ಶನಿವಾರ ಸುರನ್‌ಕೋಟ್ ಪ್ರದೇಶದ ಡೋಗ್ರಾ ನಾಲೆ ದಾಟುತ್ತಿದ್ದಾಗ ಉಂಟಾದ ಹಠಾತ್ ಪ್ರವಾಹದಲ್ಲಿ ನೀರು ಪಾಲಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯೋಧ ನಾಯಬ್ ಸುಬೇದಾರ್ ಕುಲದೀಪ್ ಸಿಂಗ್ ಮೃತದೇಹ ಶನಿವಾರದಂದೇ ಪತ್ತೆಯಾಗಿತ್ತು. ಇಂದು ಲ್ಯಾನ್ಸ್ ನಾಯಕ್ ತೇಲು ರಾಮ್ ಮೃತದೇಹ ಹೊರತೆಗೆಯಲಾಗಿದೆ.

ADVERTISEMENT

ಪೂಂಚ್‌ನ ಅತ್ಯಂತ ದುರ್ಗಮ ಭೂಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಈ ಇಬ್ಬರು ಯೋಧರು ಗಸ್ತು ತಿರುಗುತ್ತಿದ್ದ ವೇಳೆ ಹಠಾತ್ ಪ್ರವಾಹ ಉಂಟಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.