ADVERTISEMENT

ಮಹಾರಾಷ್ಟ್ರ | ಗಗನಸಖಿ ಮೇಲೆ ಅತ್ಯಾಚಾರ: ಸಹೋದ್ಯೋಗಿಯ ಬಂಧನ

ಪಿಟಿಐ
Published 20 ಜುಲೈ 2025, 13:03 IST
Last Updated 20 ಜುಲೈ 2025, 13:03 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಠಾಣೆ: ಗಗನಸಖಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಸಂತ್ರಸ್ತೆಯ ಸಹೋದ್ಯೋಗಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. 

ಜೂನ್‌ 29ರಂದು ಲಂಡನ್‌ ಪ್ರಯಾಣದಿಂದ ಮರಳಿದ ನಂತರ, ಗಗನಸಖಿಯನ್ನು (23) ಸಹೋದ್ಯೋಗಿ (25)  ಬಲವಂತವಾಗಿ ಮಹಾರಾಷ್ಟ್ರದ ಠಾಣೆಯಲ್ಲಿರುವ ತನ್ನ ನಿವಾಸಕ್ಕೆ ಕರೆದುಕೊಂಡು ಹೋಗಿದ್ದ. ಅಲ್ಲಿ ಅತ್ಯಾಚಾರ ಎಸಗಿದ್ದ. ಘಟನೆಗೆ ಸಂಬಂಧಿಸಿದಂತೆ ನವಗ್ರಹ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ADVERTISEMENT

ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 64, 351(2), 352ರ ಅಡಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.