ಬಂಧನ
ಹೈದರಾಬಾದ್: ಚೆನ್ನೈನಿಂದ ಹೈದರಾಬಾದ್‌ಗೆ ಹೊರಟಿದ್ದ ವಿಮಾನದಲ್ಲಿ ವ್ಯಕ್ತಿಯೊಬ್ಬ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಶುಕ್ರವಾರ ನಡೆದಿದ್ದು, ಉತ್ತರ ಪ್ರದೇಶದಿಂದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಕುಡಿತದ ಅಮಲಿನಲ್ಲಿ ಪಕ್ಕದಲ್ಲೇ ಕುಳಿತಿದ್ದ 38 ವರ್ಷದ ಐಟಿ ಉದ್ಯೋಗಿಯನ್ನು ಅನುಚಿತವಾಗಿ ಸ್ಪರ್ಶಿಸಿದ. ಬಳಿಕ ಮಹಿಳೆ ಪೊಲೀಸರಿಗೆ ತಿಳಿಸಿ, ಆರೋಪಿ ವಿರುದ್ಧ ದೂರು ದಾಖಲಿಸಿದರು.
ಆರೋಪಿಯನ್ನು ಬಂಧಿಸಲಾಗಿದ್ದು, ಉದ್ದೇಶಪೂರ್ವಕವಾಗಿ ಮಹಿಳೆಯನ್ನು ಸ್ಪರ್ಶಿಸಿಲ್ಲ ಎಂದು ಆರೋಪಿ ತಿಳಿಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.