ADVERTISEMENT

ನವೆಂಬರ್‌ನಲ್ಲಿ ಐಪಿಎಸ್ ಹಿರಿಯ ಅಧಿಕಾರಿಗಳ ಸಭೆ

ಪಿಟಿಐ
Published 4 ಅಕ್ಟೋಬರ್ 2020, 10:54 IST
Last Updated 4 ಅಕ್ಟೋಬರ್ 2020, 10:54 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಡಿಜಿಪಿ ಮತ್ತು ಐಜಿಪಿ ದರ್ಜೆಯ ದೇಶದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯು ನವೆಂಬರ್ ತಿಂಗಳಲ್ಲಿ ವಿಡಿಯೊ ಸಂವಾದದ ಮೂಲಕ ನಡೆಯಲಿದೆ.

ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಕೇಂದ್ರ ಸರ್ಕಾರದ ಸುಮಾರು 260ಕ್ಕೂ ಅಧಿಕ ಅಧಿಕಾರಿಗಳು ಎರಡು ದಿನಗಳ ಸಭೆಯಲ್ಲಿ ಭಾಗವಹಿಸುವರು ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಪ್ರಾಕೃತಿಕ ವಿಕೋಪ, ಸೋಂಕು ಸಂದರ್ಭಗಳು, ಸೈಬರ್ ಭಯೋತ್ಪಾದನೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಪ್ರಾಯೋಜಿತ ಉಗ್ರ ಚಟುವಟಿಕೆಗಳ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು ವಹಿಸಬೇಕಾದ ಕ್ರಮಗಳು ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಂಭವವಿದೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಜರಾಗುವರು. ನವೆಂಬರ್‌ ಕಡೆಯ ವಾರದಲ್ಲಿ ಸಭೆಯು ನಡೆಯಲಿದೆ. ಸೋಂಕು ಬಿಕ್ಕಟ್ಟಿನ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು ಕಾರ್ಯನಿರ್ವಹಣೆಗೆ ಶ್ಲಾಘನೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕು ನಿರ್ವಹಣೆ ಕುರಿತಂತೆ ಅವರ ಅರಿವು ಮತ್ತು ಸಾಮರ್ಥ್ಯ ವೃದ್ಧಿ ಬಗ್ಗೆಯೂ ಚರ್ಚೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.