ADVERTISEMENT

ಪ್ರತಿಭಟನಕಾರರಿಗೆ ವಿದೇಶಿ ಹಣ: ಕಿರಣ್‌ ರಿಜಿಜು ಆರೋಪ

​ಪ್ರಜಾವಾಣಿ ವಾರ್ತೆ
Published 16 ಜನವರಿ 2020, 20:00 IST
Last Updated 16 ಜನವರಿ 2020, 20:00 IST
ಕಿರಣ್‌ ರಿಜಿಜು
ಕಿರಣ್‌ ರಿಜಿಜು   

ಲಖನೌ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ನಡೆಸುತ್ತಿರುವ ಪ್ರತಿಭಟನಕಾರರುವಿದೇಶದಿಂದ ದೇಣಿಗೆ ಪಡೆಯುತ್ತಿದ್ದಾರೆ. ದೇಶವನ್ನು ವಿಭಾಗಿಸುವುದೇ ಇವರ ಉದ್ದೇಶವಾಗಿದೆ ಎಂದು ಕೇಂದ್ರ ಸಚಿವ ಕಿರಣ್‌ ರಿಜಿಜು ಆರೋಪ‍ ಮಾಡಿದ್ದಾರೆ.

‘ಕಾಯ್ದೆಯನ್ನು ವಿರೋಧಿಸುತ್ತಿರುವ ಈ ‘ತುಕಡೆ ತುಕಡೆ ಗ್ಯಾಂಗ್‌’ನ ಸಂಖ್ಯೆ ಕಡಿಮೆ ಇದೆ. ಕೆಲವು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು, ಚಲನಚಿತ್ರತಾರೆಯರು ಮತ್ತುಸಾಮಾಜಿಕ ಜಾಲತಾಣವನ್ನು ತಮ್ಮ ಉದ್ದೇಶ ಸಾಧನೆಗಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.

‘ಯುವಕರು ಇಂತಹ ದೇಶದ್ರೋಹಿಗಳ ಕಾರ್ಯಕ್ಕೆ ಬೆಂಬಲ ನೀಡದೇ, ಶ್ರೇಷ್ಠ ಭಾರತವನ್ನು ನಿರ್ಮಿಸಲು ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.