ಅಮೆರಿಕ ಭಾರತ ಧ್ವಜ
ನವದೆಹಲಿ: ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಮೇ 27ರಿಂದ 29ರವರೆಗೆ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆಬ್ರುವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದಾಗ ನಡೆಸಿದ್ದ ಮಾತುಕತೆಯನ್ನು ಮುಂದುವರಿಸುವ ಉದ್ದೇಶದ ಭೇಟಿ ಇದಾಗಿದೆ ಎಂದು ವಿದೇಶಾಂಗ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ವಾಷಿಂಗ್ಟನ್ ಡಿಸಿಗೆ ಭೇಟಿ ನೀಡಲಿರುವ ಮಿಸ್ರಿ ಅವರು ಅಮೆರಿಕದ ಹಿರಿಯ ಅಧಿಕಾರಿಗಳ ಜತೆಗೆ ಚರ್ಚಿಸಲಿದ್ದಾರೆ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.