ಮೆಂಧರ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಶುಕ್ರವಾರ ಸಂಭವಿಸಿದ ಕಾಳ್ಗಿಚ್ಚಿನಿಂದಾಗಿ ಹುದುಗಿಸಿಟ್ಟಿದ್ದ ನೆಲಬಾಂಬ್‌ಗಳು ಸ್ಫೋಟಗೊಂಡಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಯಾವುದೇ ಜೀವಹಾನಿ ವರದಿಯಾಗಿಲ್ಲ.
ಎಲ್‌ಒಸಿ ಬಳಿ ಕಾಣಿಸಿಕೊಂಡ ಬೆಂಕಿ ಕೃಷ್ಣ ಘಾಟಿ ವಲಯದ ಪರ್ವತ ಪ್ರದೇಶದ ದೊಡ್ಡ ಭಾಗಕ್ಕೆ ಹರಡಿತು ಎಂದು ಅವರು ಹೇಳಿದ್ದಾರೆ.
ಕಾಡಿನ ಬೆಂಕಿಯಿಂದಾಗಿ, ಆ ಪ್ರದೇಶದಲ್ಲಿ ಹುದುಗಿಸಿದ್ದ ನೆಲಬಾಂಬ್‌ಗಳು ಸ್ಫೋಟಗೊಂಡಿವೆ. ಆದರೆ, ಯಾರಿಗೂ ಯಾವುದೇ ಜೀವಹಾನಿ ಅಥವಾ ಗಾಯಗಳಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಸೇನೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರೊಂದಿಗೆ ಸೇರಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.