ADVERTISEMENT

ದೆಹಲಿ ಪಾಲಿಕೆ ಚುನಾವಣೆ: ಎಎಪಿ ಮಾಜಿ ಶಾಸಕ ಸುರೇಂದ್ರ ಸಿಂಗ್ ಬಿಜೆಪಿಗೆ ಸೇರ್ಪಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ನವೆಂಬರ್ 2022, 13:25 IST
Last Updated 29 ನವೆಂಬರ್ 2022, 13:25 IST
ಮಾಜಿ ಎಎಪಿ ಶಾಸಕ ಸುರೇಂದರ್ ಸಿಂಗ್ ಅವರು ಮಂಗಳವಾರ ಬಿಜೆಪಿಗೆ ಸೇರ್ಪಡೆಯಾದರು.
ಮಾಜಿ ಎಎಪಿ ಶಾಸಕ ಸುರೇಂದರ್ ಸಿಂಗ್ ಅವರು ಮಂಗಳವಾರ ಬಿಜೆಪಿಗೆ ಸೇರ್ಪಡೆಯಾದರು.    

ನವದೆಹಲಿ: ದೆಹಲಿಯ ಆಮ್‌ ಆದ್ಮಿ ಪಕ್ಷದ (ಎಎಪಿ) ಮಾಜಿ ಶಾಸಕ ಸುರೇಂದರ್ ಸಿಂಗ್ ಅವರು ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

2020ರ ದೆಹಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಪಕ್ಷದಿಂದ ಟಿಕೆಟ್ ದೊರೆತಿರಲಿಲ್ಲ. ಇದರಿಂದ ಬೇಸತ್ತಿದ್ದ ಅವರು ಎಎಪಿಗೆ ರಾಜೀನಾಮೆ ಸಲ್ಲಿಸಿದ್ದರು.

ಇದೀಗ ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಸುರೇಂದರ್ ಸಿಂಗ್ ಬಿಜೆಪಿಗೆ ಸೇರ್ಪಡೆಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ‌

ADVERTISEMENT

ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್‌ಗಳಿಗೆ ಡಿಸೆಂಬರ್ 4ರಂದು ಚುನಾವಣೆ ನಡೆಯಲಿದ್ದು, ಡಿ.7ರಂದು ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.