ADVERTISEMENT

ಕೋವಿಡ್ ಸೋಂಕು: ಮಾಜಿ ಅಟಾರ್ನಿ ಜನರಲ್‌ ಸೋಲಿ ಸೊರಾಬ್ಜಿ ನಿಧನ

ಪಿಟಿಐ
Published 30 ಏಪ್ರಿಲ್ 2021, 6:19 IST
Last Updated 30 ಏಪ್ರಿಲ್ 2021, 6:19 IST
ಸೋಲಿ ಸೊರಬ್ಜಿ
ಸೋಲಿ ಸೊರಬ್ಜಿ   

ನವದೆಹಲಿ: ಕೋವಿಡ್‌ ಸೋಂಕಿನಿಂದಾಗಿ ಮಾಜಿ ಅಟಾರ್ನಿ ಜನರಲ್ ಮತ್ತು ಕಾನೂನು ತಜ್ಞ ಸೋಲಿ ಸೊರಾಬ್ಜಿ(91) ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೋವಿಡ್‌ ಸೋಂಕು ತಗುಲಿದ ನಂತರ ಅವರನ್ನು ದಕ್ಷಿಣ ದೆಹಲಿಯ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಸೋಲಿ ಸೊರಾಬ್ಜಿ ಅವರು 1989–90 ಮತ್ತು 1998 ರಿಂದ 2004ರ ವರೆಗೆ ಕೇಂದ್ರ ಸರ್ಕಾರದಲ್ಲಿ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.