ADVERTISEMENT

'ಪಂಜಾಬ್ ಲೋಕ್‌ ಕಾಂಗ್ರೆಸ್': ಹೊಸ ಪಕ್ಷದ ಹೆಸರು ಘೋಷಿಸಿದ ಅಮರಿಂದರ್‌ ಸಿಂಗ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ನವೆಂಬರ್ 2021, 12:27 IST
Last Updated 2 ನವೆಂಬರ್ 2021, 12:27 IST
ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌
ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌   

ನವದೆಹಲಿ: ಕಾಂಗ್ರೆಸ್‌ ತೊರೆದಿದ್ದ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರು ಹೊಸ ಪಕ್ಷದ ಹೆಸರನ್ನು ಮಂಗಳವಾರ ಘೋಷಿಸಿದ್ದಾರೆ.

ತಮ್ಮ ನಾಯಕತ್ವದ ನೂತನ ಪಕ್ಷಕ್ಕೆ 'ಪಂಜಾಬ್‌ ಲೋಕ್‌ ಕಾಂಗ್ರೆಸ್‌' ಎಂದು ನಾಮಕರಣ ಮಾಡಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಕಳುಹಿಸಿದ ನಂತರ ಅವರು ಅಧಿಕೃತವಾಗಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.