ADVERTISEMENT

ಆಂಧ್ರಪ್ರದೇಶದ ಮಾಜಿ ಸಿಎಂ ಕೆ.ರೋಸಯ್ಯ ನಿಧನ, ಜಗನ್‌ ಸೇರಿ ಗಣ್ಯರಿಂದ ಸಂತಾಪ

ಐಎಎನ್ಎಸ್
Published 4 ಡಿಸೆಂಬರ್ 2021, 6:01 IST
Last Updated 4 ಡಿಸೆಂಬರ್ 2021, 6:01 IST
ಕರ್ನಾಟಕದ ಉಸ್ತುವಾರಿ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಕೆ. ರೋಸಯ್ಯ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೂಗುಚ್ಛ ನೀಡಿ ಅಭಿನಂದಿಸಿದ್ದರು. –ಪ್ರಜಾವಾಣಿ ಚಿತ್ರ
ಕರ್ನಾಟಕದ ಉಸ್ತುವಾರಿ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಕೆ. ರೋಸಯ್ಯ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೂಗುಚ್ಛ ನೀಡಿ ಅಭಿನಂದಿಸಿದ್ದರು. –ಪ್ರಜಾವಾಣಿ ಚಿತ್ರ   

ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೆ.ರೋಸಯ್ಯ ಅವರು ಇಂದು (ಶನಿವಾರ) ನಿಧನರಾಗಿದ್ದಾರೆ.

ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ರೋಸಯ್ಯ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಸ್ಪಂದಿಸದೆ ಅವರು ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

2009ರಲ್ಲಿ ಅಂದಿನ ಆಂಧ್ರಪ್ರದೇಶದ ಸಿಎಂ ವೈ.ಎಸ್.ರಾಜಶೇಖರ ರೆಡ್ಡಿ ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದರು. ಆಗ ರೋಸಯ್ಯ ಅವರು 2009ರ ಸೆಪ್ಟೆಂಬರ್ 3ರಿಂದ 2010ರ ನವೆಂಬರ್ 24 ರವರೆಗೆ ಮುಖ್ಯಮಂತ್ರಿಯಾಗಿದ್ದರು.

ADVERTISEMENT

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ರೋಸಯ್ಯ, 2011 ರಿಂದ 2016 ರವರೆಗೆ ತಮಿಳುನಾಡು ರಾಜ್ಯಪಾಲರಾಗಿ ಸೇವೆ ಸಲ್ಲಿದ್ದರು. ಅವರು ಕರ್ನಾಟಕದ ರಾಜ್ಯಪಾಲರಾಗಿಯೂ ಎರಡು ತಿಂಗಳ ಅವಧಿಗೆ ಕಾರ್ಯ ನಿರ್ವಹಿಸಿದ್ದರು.

1933ರಲ್ಲಿ ಜನಿಸಿದ್ದ ರೋಸಯ್ಯ ಅವರು 1968ರಲ್ಲಿ ಆಂಧ್ರ ಪ್ರದೇಶದ ಚಿರಾಲ ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿಗೆ ವಿಧಾನಸಭೆಗೆ ಶಾಸಕರಾಗಿ ಆಯ್ಕೆಯಾಗಿದ್ದರು.

ರೋಸಯ್ಯ ನಿಧನಕ್ಕೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.