ADVERTISEMENT

ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್‌ಗೆ ಕೋವಿಡ್-19 ದೃಢ

ಏಜೆನ್ಸೀಸ್
Published 26 ಆಗಸ್ಟ್ 2020, 12:04 IST
Last Updated 26 ಆಗಸ್ಟ್ 2020, 12:04 IST
ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್
ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್    

ನವದೆಹಲಿ: ಅಸ್ಸಾಂನ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ತರುಣ್ ಗೊಗೊಯ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ನಿನ್ನೆ ನನಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ಕೆಲ ದಿನಗಳಿಂದ ಯಾರೆಲ್ಲ ನನ್ನ ಸಂಪರ್ಕಕ್ಕೆ ಬಂದಿದ್ದೀರೋ ಅವರೆಲ್ಲ ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ರಾಜ್ಯದ ಸಚಿವರಾದ ಅರ್ಜುನ್ ರಾಮ್ ಮೇಘ್ವಾಲ್, ಕೃಷಿ ಖಾತೆ ರಾಜ್ಯ ಸಚಿವರಾದ ಕೈಲಾಶ್ ಚೌಧರಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮತ್ತು ಪಿ.ಸಿ. ಶರ್ಮಾ ಅವರು ಸೇರಿದಂತೆ ಹಲವಾರು ನಾಯಕರಿಗೆ ಕೋವಿಡ್-19 ಸೋಂಕು ತಗುಲಿದೆ. ಈ ಪೈಕಿ ಕೆಲವರು ಗುಣಮುಖರಾಗಿದ್ದಾರೆ.

ADVERTISEMENT

ದೇಶದಲ್ಲಿ ಬುಧವಾರ 67,151 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಕಳೆದ 24 ಗಂಟೆಗಳಲ್ಲಿ 1,059 ಜನರು ಸಾವಿಗೀಡಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 32,34,475ಕ್ಕೆ ಏರಿಕೆಯಾಗಿದೆ. 7,07,267 ಸಕ್ರಿಯ ಪ್ರಕರಣಗಳೊಂದಿಗೆ 24,67,759 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟಾರೆ 59,449 ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.