ADVERTISEMENT

ತರುಣ್‌ ಗೊಗೊಯ್‌ ಮತ್ತೆ ಆಸ್ಪತ್ರೆಗೆ ದಾಖಲು

ಪಿಟಿಐ
Published 2 ನವೆಂಬರ್ 2020, 11:27 IST
Last Updated 2 ನವೆಂಬರ್ 2020, 11:27 IST
ತರುಣ್‌ ಗೊಗೊಯ್‌
ತರುಣ್‌ ಗೊಗೊಯ್‌   

ಗುವಾಹಟಿ: ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್‌ ಗೊಗೊಯ್‌(86 ವರ್ಷ) ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೆಂಟಿಲೇಟರ್‌ ನೆರವಿನಿಂದ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.

ಕೋವಿಡ್‌ –19ಕ್ಕೆೆ ತುತ್ತಾಗಿದ್ದ ಅವರು ಕಳೆದ ವಾರವಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಭಾನುವಾರ ರಾತ್ರಿ ಅವರ ಆರೋಗ್ಯಸ್ಥಿತಿ ಹದಗೆಟ್ಟಿದ್ದರಿಂದ ಗುವಾಹಟಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ವೆಂಟಿಲೇಟರ್‌ ನೆರವಿನಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಆರೋಗ್ಯ ಅಧೀಕ್ಷಕ ಅಭಿಜಿತ್‌ ಶರ್ಮ ತಿಳಿಸಿದ್ದಾರೆ.

’ವೈದ್ಯರ ತಂಡ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದೆ. ಅವರ ಅಮೋನಿಯಾ ಪ್ರಮಾಣ ಹೆಚ್ಚಿದೆ. ಆಮ್ಲಜನಕ ಪ್ರಮಾಣ ಸಹಜ ಸ್ಥಿತಿಯಲ್ಲಿದೆ. ಗೊಗೊಯ್‌ ಅವರು ಮಾನಸಿಕವಾಗಿ ಸದೃಢರಾಗಿದ್ದಾರೆ‘ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಆಗಸ್ಟ್‌ ತಿಂಗಳಲ್ಲಿ ಗೊಗೊಯ್‌ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಸಂದರ್ಭದಲ್ಲಿ, ಅಸ್ಸಾಂ ಸರ್ಕಾರವು 9 ವೈದ್ಯರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಿತ್ತು. ಈ ತಂಡವೇ ಗೊಗೊಯ್‌ ಅವರ ಆರೋಗ್ಯದ ನಿಗಾ ವಹಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.