ನವದೆಹಲಿ:ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಐಎಎಸ್ ಅಧಿಕಾರಿ ಜೆ.ಮಂಜುನಾಥ್ ಅವರು ಜಾಮೀನು ಕೋರಿ ಸೋಮವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು ಇದೇ 17ರಂದು ಅರ್ಜಿಯ ವಿಚಾರಣೆ ನಡೆಸಲು ನ್ಯಾಯಾಲಯ ಸಮ್ಮತಿಸಿದೆ.
ಕರ್ನಾಟಕ ಹೈಕೋರ್ಟ್ ಆ.3ರಂದು ಅವರಿಗೆಜಾಮೀನು ನಿರಾಕರಿಸಿತ್ತು.
ಎಸಿಬಿ ವಿರುದ್ಧ ಹೈಕೋರ್ಟ್ ಕಟುವಾದ ಟೀಕೆಗಳ ಮೂಲಕ ಚಾಟಿ ಬೀಸಿತ್ತು. ಈ ಪ್ರಕರಣದಲ್ಲಿ ತಮಗೆ ವರ್ಗಾವಣೆ ಬೆದರಿಕೆ ಬಂದಿರುವುದನ್ನು ನ್ಯಾಯಮೂರ್ತಿ ಬಹಿರಂಗಪಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.