ADVERTISEMENT

ಡಿಡಿಸಿ ಚುನಾವಣೆ: 11 ಮತಗಳ ಅಂತರದಿಂದ ಬಿಜೆಪಿ ಮಾಜಿ ಸಚಿವ ಚೌಧರಿಗೆ ಸೋಲು

ಜಮ್ಮುವಿನಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಮಂಡಳಿ

ಪಿಟಿಐ
Published 23 ಡಿಸೆಂಬರ್ 2020, 6:18 IST
Last Updated 23 ಡಿಸೆಂಬರ್ 2020, 6:18 IST
ಜಮ್ಮುವಿನಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿರುವುದು
ಜಮ್ಮುವಿನಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿರುವುದು   

ಜಮ್ಮು: ಜಮ್ಮು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ನಡೆದ ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ) ಚುನಾವಣೆಯಲ್ಲಿ ಸಚೇತ್‌ಗಡ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿಯ ಮಾಜಿ ಸಚಿವ ಶಾಮ್‌ಲಾಲ್‌ ಚೌಧರಿ 11 ಮತಗಳ ಅಂತರದಿಂದ ಸೋತಿದ್ದಾರೆ.

ರಾಜ್ಯ ಚುನಾವಣಾ ಪ್ರಾಧಿಕಾರ (ಎಸ್‌ಇಎ) ನೀಡಿದ ಅಂಕಿಅಂಶಗಳ ಪ್ರಕಾರ, ಬಿಜೆಪಿಯ ಶಾಮ್‌ಲಾಲ್‌ ಚೌಧರಿ ಅವರು 12,958 ಮತಗಳನ್ನು ಪಡೆದಿದ್ದರೆ, ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ತಾರಂಜಿತ್‌ ಸಿಂಗ್‌ 12,969 ಮತಗಳನ್ನು ಪಡೆದು, ಹನ್ನೊಂದು ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಶ್ಯಾಮ್‌ಲಾಲ್, ಜಮ್ಮು ಮತ್ತು ಕಾಶ್ಮೀರದಲ್ಲಿ ಆಳ್ವಿಕೆ ನಡೆಸಿದ್ದ ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರದಲ್ಲಿ ಸಂಪುಟದರ್ಜೆ ಸಚಿವರಾಗಿದ್ದರು. ಸುಚೇತ್‌ಗಡ ಕ್ಷೇತ್ರದಿಂದ 2008 ಮತ್ತು 2014ರ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ್ದರು. ಆರ್ ಎಸ್ ಪುರದ ಗಡಿ ಪಟ್ಟಿಯಲ್ಲಿ ಪ್ರಬಲ ನಾಯಕ ಎಂದು ಪರಿಗಣಿಸಲಾಗಿತ್ತು.

ADVERTISEMENT

ನ್ಯಾಷನಲ್‌ ಕಾನ್ಫರೆನ್ಸ್‌ನ (ಎನ್‌ಸಿ) ಮಾಜಿ ಮುಖಂಡ ಸಿಂಗ್ ಸ್ವತಂತ್ರವಾಗಿ ಡಿಡಿಸಿ ಚುನಾವಣೆಯಲ್ಲಿ ಸ್ಪರ್ಧಿಸಿದರು.

ಈ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್‌ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ನೇತೃತ್ವದ ಗುಪ್ಕರ್ ಮೈತ್ರಿಕೂಟವು 280 ಸ್ಥಾನಗಳಲ್ಲಿ 110 ಸ್ಥಾನಗಳನ್ನು ಗೆಲ್ಲುವ ಮೂಲಕ ಅಗ್ರಸ್ಥಾನದಲ್ಲಿದೆ. ಬಿಜೆಪಿ 74 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಜಮ್ಮುವಿನಲ್ಲಿ ಬಿಜೆಪಿ 11 ಸ್ಥಾನಗಳನ್ನು ಪಡೆದುಕೊಂಡರೆ, ಸ್ವತಂತ್ರ ಅಭ್ಯರ್ಥಿಗಳು ಎರಡು ಸ್ಥಾನಗಳನ್ನು ಪಡೆದುಕೊಂಡಿವೆ. ಒಂದು ಸ್ಥಾನ ಎನ್‌ಸಿ ಪಕ್ಷದ ಪಾಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.