ADVERTISEMENT

ಚುನಾವಣೋತ್ತರ ಹಿಂಸಾಚಾರ ತನಿಖೆ: ನಿವೃತ್ತ ನ್ಯಾ. ಮಂಜುಳಾ ಚೆಲ್ಲೂರ್‌ ಮೇಲ್ವಿಚಾರಣೆ

ಕಲ್ಕತ್ತ ಹೈಕೋರ್ಟ್‌ನ ನ್ಯಾಯಪೀಠ ಆದೇಶ

ಪಿಟಿಐ
Published 3 ಸೆಪ್ಟೆಂಬರ್ 2021, 10:18 IST
Last Updated 3 ಸೆಪ್ಟೆಂಬರ್ 2021, 10:18 IST
ಕೋರ್ಟ್‌
ಕೋರ್ಟ್‌   

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರ ಕುರಿತು ಎಸ್‌ಐಟಿ ನಡೆಸುತ್ತಿರುವ ತನಿಖೆಯ ಮೇಲ್ವಿಚಾರಣೆಯನ್ನು ಕಲ್ಕತ್ತ ಹೈಕೋರ್ಟ್‌ನ ನಿವೃತ್ತ ಮುಖ್ಯನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್ ನಡೆಸಲಿದ್ದಾರೆ.

‘ವಿಧಾನಸಭೆ ಚುನಾವಣೆ ನಂತರ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳನ್ನು ಹೊರತುಪಡಿಸಿ ಇತರ ಎಲ್ಲ ಹಿಂಸಾಚಾರ ಪ್ರಕರಣಗಳ ಮೇಲ್ವಿಚಾರಣೆಯನ್ನು ನಿವೃತ್ತ ಮುಖ್ಯನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್‌ ನಡೆಸುವರು’ ಎಂದು ಕಲ್ಕತ್ತ ಹೈಕೋರ್ಟ್‌ನ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ನ್ಯಾಯಪೀಠ ಶುಕ್ರವಾರ ತಿಳಿಸಿತು.

ಚುನಾವಣೋತ್ತರ ಹಿಂಸಾಚಾರ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಹಲವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದರು. ಎಲ್ಲ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಪೀಠ, ಅತ್ಯಾಚಾರ, ಕೊಲೆ ಸೇರಿ ಎಲ್ಲ ಆರೋಪಗಳ ಕುರಿತು ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡಿ ಆಗಸ್ಟ್‌ 19ರಂದು ಆದೇಶಿಸಿತ್ತು.

ADVERTISEMENT

ಈ ಆದೇಶ ಹೊರಡಿಸಿದ ದಿನದಿಂದ ಆರು ವಾರಗಳ ಒಳಗಾಗಿ ತನಿಖಾ ವರದಿ ಸಲ್ಲಿಸುವಂತೆ ಸಿಬಿಐ ಹಾಗೂ ಎಸ್‌ಐಟಿಗೆ ನ್ಯಾಯಪೀಠ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.