ರಾಜೀವ್ ಕುಮಾರ್
ನವದೆಹಲಿ: ಮಾಜಿ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ದೇಶ ತೊರೆದಿಲ್ಲ, ಅವರು ಭಾರತದಲ್ಲಿಯೇ ಇದ್ದಾರೆ ಎಂದು ಅವರ ಸಮೀಪವರ್ತಿಗಳು ಬುಧವಾರ ಸ್ಪಷ್ಟಪಡಿಸಿದ್ದಾರೆ.
2024ರ ಲೋಕಸಭಾ ಚುನಾವಣೆ ರಾಜೀವ್ ಅವರ ಮೇಲ್ವಿಚಾರಣೆಯಲ್ಲಿ ನಡೆದಿತ್ತು. ಅವರು 2025ರ ಫೆಬ್ರುವರಿಯಲ್ಲಿ ನಿವೃತ್ತರಾಗಿದ್ದರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕ, ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮತಕಳವು ನಡೆದಿದೆ ಎಂದು ಆರೋಪ ಮಾಡಿದ್ದರು. ಅದರ ಬೆನ್ನಲ್ಲೇ ರಾಜೀವ್ ಅವರು ದೇಶ ತೊರೆದಿದ್ದಾರೆ ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಹಬ್ಬಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.