ADVERTISEMENT

ಮಹಾರಾಷ್ಟ್ರ ಸರ್ಕಾರಕ್ಕೆ ಬಂಡಾಯದ ಬಿಸಿ: ಕಾಂಗ್ರೆಸ್ ವೀಕ್ಷಕರಾಗಿ ಕಮಲ್‌ನಾಥ್ ನೇಮಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜೂನ್ 2022, 10:31 IST
Last Updated 21 ಜೂನ್ 2022, 10:31 IST
   

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್‌ ಹಾಗೂ ಎನ್‌ಸಿಪಿ ನೇತೃತ್ವದ 'ಮಹಾ ವಿಕಾಸ ಅಘಾಡಿ' ಸರ್ಕಾರಕ್ಕೆ ಬಂಡಾಯದ ಬಿಸಿ ತಟ್ಟಿದೆ. ಇದರ ಬೆನ್ನಲ್ಲೇ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಕಮಲನಾಥ್‌ ಅವರನ್ನುಮಹಾರಾಷ್ಟ್ರದಲ್ಲಿ ಪಕ್ಷದ ವೀಕ್ಷಕರನ್ನಾಗಿ ಕಾಂಗ್ರೆಸ್‌ ನೇಮಿಸಿದೆ.

ಸಚಿವ ಏಕನಾಥ್ ಶಿಂಧೆ ಸೇರಿದಂತೆ, ಶಿವಸೇನೆಯ ಹಲವು ಶಾಸಕರು ಗುಜರಾತ್‌ನ ಸೂರತ್‌ನಲ್ಲಿರುವ ಹೋಟೆಲ್‌ವೊಂದರಲ್ಲಿ ವಾಸ್ತವ್ಯ ಹೂಡಿದ್ದಾರೆ.

ಸೋಮವಾರ ನಡೆದ ಮಹಾರಾಷ್ಟ್ರ ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ ನಡೆದಿರುವ ಶಂಕೆ ವ್ಯಕ್ತವಾಗಿದೆ.

ADVERTISEMENT

ವಿಧಾನ ಪರಿಷತ್ತಿನ ಹತ್ತು ಸ್ಥಾನಗಳ ಪೈಕಿ ಆರರಲ್ಲಿ ಆಡಳಿತಾರೂಢ ಶಿವಸೇನೆ, ಕಾಂಗ್ರೆಸ್‌ ಹಾಗೂ ಎನ್‌ಸಿಪಿಯ ತಲಾ ಇಬ್ಬರು ಕಣಕ್ಕಿಳಿದಿದ್ದರು. ಈ ಪೈಕಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದದಲಿತ ಅಭ್ಯರ್ಥಿ ಚಂದ್ರಕಾಂತ್‌ ಹಂದೋರೆ ಸೋಲು ಕಂಡಿದ್ದು, ಉಳಿದ ಐವರು ಜಯ ಗಳಿಸಿದ್ದಾರೆ.

ಇತ್ತ ತಾನು ಸ್ಪರ್ಧಿಸಿದ್ದ ಐದೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ದಕ್ಕಿಸಿಕೊಂಡಿದೆ. ಹೀಗಾಗಿ ಅಡ್ಡ ಮತದಾನದ ಶಂಕೆ ವ್ಯಕ್ತವಾಗಿತ್ತು. ಹೀಗಾಗಿಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಶಿವಸೇನಾ ಶಾಸಕರ ತುರ್ತು ಸಭೆ ಕರೆದಿದ್ದರು. ಈ ಮಧ್ಯೆ ಶಿವಸೇನೆಯ ಶಾಸಕರ ಒಂದು ಗುಂಪು ಸಂಪರ್ಕಕ್ಕೆ ಸಿಕ್ಕಿರಲಿಲ್ಲ.

ಶಾಸಕರು ಸೂರತ್‌ನಲ್ಲಿ ವಾಸ್ತವ್ಯ ಹೂಡಿರುವ ಬಗ್ಗೆಎನ್‌ಸಿಪಿ ನಾಯಕ ಶರದ್‌ ಪವಾರ್‌ ಕಿಡಿಕಾರಿದ್ದಾರೆ. ಮಹಾ ವಿಕಾಸ ಅಘಾಡಿ ಸರ್ಕಾರವನ್ನು ಉರುಳಿಸಲು ಮೂರನೇ ಬಾರಿಗೆ ಪ್ರಯತ್ನ ನಡೆದಿದೆ. ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಪರಿಸ್ಥಿತಿಯನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.