ADVERTISEMENT

ಕಾಂಗ್ರೆಸ್‌ ತೊರೆದ ಸುಷ್ಮಿತಾ ದೇವ್‌ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆ

ಡೆಕ್ಕನ್ ಹೆರಾಲ್ಡ್
Published 16 ಆಗಸ್ಟ್ 2021, 9:46 IST
Last Updated 16 ಆಗಸ್ಟ್ 2021, 9:46 IST
ಟಿಎಂಸಿ ನಾಯಕರಾದ ಅಭಿಷೇಕ್ ಬ್ಯಾನರ್ಜಿ, ಡೆರೆಕ್‌ ಒಬ್ರಿಯಾನ್‌ ಉಪಸ್ಥಿತಿಯಲ್ಲಿ ಸುಷ್ಮಿತಾ ದೇವ್‌ ಅವರು ಟಿಎಂಸಿಗೆ ಸೇರ್ಪಡೆಯಾದರು. (ಚಿತ್ರ ಕೃಪೆ: ತೃಣಮೂಲ ಕಾಂಗ್ರೆಸ್ ಟ್ವಿಟರ್ ಖಾತೆ)
ಟಿಎಂಸಿ ನಾಯಕರಾದ ಅಭಿಷೇಕ್ ಬ್ಯಾನರ್ಜಿ, ಡೆರೆಕ್‌ ಒಬ್ರಿಯಾನ್‌ ಉಪಸ್ಥಿತಿಯಲ್ಲಿ ಸುಷ್ಮಿತಾ ದೇವ್‌ ಅವರು ಟಿಎಂಸಿಗೆ ಸೇರ್ಪಡೆಯಾದರು. (ಚಿತ್ರ ಕೃಪೆ: ತೃಣಮೂಲ ಕಾಂಗ್ರೆಸ್ ಟ್ವಿಟರ್ ಖಾತೆ)   

ಕೋಲ್ಕತ್ತ: ಕಾಂಗ್ರೆಸ್‌ ಪಕ್ಷಕ್ಕೆ ಇಂದು (ಸೋಮವಾರ) ಬೆಳಿಗ್ಗೆ ರಾಜೀನಾಮೆ ನೀಡಿರುವ ಹಿರಿಯ ನಾಯಕಿ ಸುಷ್ಮಿತಾ ದೇವ್‌ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಟಿಎಂಸಿ ನಾಯಕರಾದ ಅಭಿಷೇಕ್ ಬ್ಯಾನರ್ಜಿ, ಡೆರೆಕ್‌ ಒಬ್ರಿಯಾನ್‌ ಉಪಸ್ಥಿತಿಯಲ್ಲಿ ಸುಷ್ಮಿತಾ ದೇವ್‌ ಅವರು ಟಿಎಂಸಿಗೆ ಸೇರ್ಪಡೆಯಾದರು.

‘ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಸುಷ್ಮಿತಾ ದೇವ್‌ ಅವರನ್ನು ತೃಣಮೂಲ ಕಾಂಗ್ರೆಸ್ ಕುಟುಂಬಕ್ಕೆ ಸ್ವಾಗತಿಸುತ್ತಿದ್ದೇವೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದ ಪ್ರೇರಿತರಾಗಿ ಅವರು ಪಕ್ಷಕ್ಕೆ ಆಗಮಿಸಿದ್ದಾರೆ. ನಮ್ಮ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ರಾಜ್ಯಸಭಾ ಸದಸ್ಯ ಡೆರೆಕ್‌ ಒಬ್ರಿಯಾನ್‌ ಸಮ್ಮುಖದಲ್ಲಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು’ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

ADVERTISEMENT

ಹಲವು ವರ್ಷಗಳ ಕಾಲ ಎಐಸಿಸಿ ಮಹಿಳಾ ಘಟಕವನ್ನು ಮುನ್ನಡೆಸಿದ್ದ ಸುಷ್ಮಿತಾ ದೇವ್‌ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದರು. ‘ಸಾರ್ವಜನಿಕ ಸೇವೆಯಲ್ಲಿ ಹೊಸ ಅಧ್ಯಾಯವೊಂದನ್ನು ಆರಂಭಿಸುತ್ತಿದ್ದೇನೆ’ ಎಂದು ರಾಜೀನಾಮೆ ಪತ್ರದಲ್ಲಿ ಸುಷ್ಮಿತಾ ಉಲ್ಲೇಖಿಸಿರುವುದಾಗಿ ಮೂಲಗಳು ತಿಳಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.