ADVERTISEMENT

ಮಾಜಿ ಕ್ರಿಕೆಟಿಗ ಕೇದಾರ್‌ ಜಾಧವ್ ಬಿಜೆಪಿ ಸೇರ್ಪಡೆ

ಪಿಟಿಐ
Published 8 ಏಪ್ರಿಲ್ 2025, 14:22 IST
Last Updated 8 ಏಪ್ರಿಲ್ 2025, 14:22 IST
ಕೇದಾರ್‌ ಜಾಧವ್
ಕೇದಾರ್‌ ಜಾಧವ್   

ಮುಂಬೈ: ಮಾಜಿ ಕ್ರಿಕೆಟಿಗ ಕೇದಾರ್‌ ಜಾಧವ್‌ ಅವರು ಮಂಗಳವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಮುಂಬೈನ ನಾರಿಮನ್‌ ಪಾಯಿಂಟ್‌ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ನಾಯಕರು ಕೇದಾರ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

‘ಛತ್ರಪತಿ ಶಿವಾಜಿ ಮಹಾರಾಜರಿಗೆ ನಮಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರು ಅಭಿವೃದ್ಧಿಯ ರಾಜಕಾರಣ ಮಾಡುತ್ತಿದ್ದಾರೆ. ಅವರ ದಾರಿಯಲ್ಲಿ ನಡೆದು ನಾನು ಸಣ್ಣ ಮಟ್ಟದ ಕೊಡುಗೆ ನೀಡುವ ಸಲುವಾಗಿ ನಾನು ಬಿಜೆಪಿ ಸೇರಿದ್ದೇನೆ’ ಎಂದು ಕೇದಾರ್ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.