ADVERTISEMENT

ಕೋವಿಡ್‌: ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಡಾ.ಎ.ಕೆ.ವಾಲಿಯಾ ನಿಧನ

ಏಜೆನ್ಸೀಸ್
Published 22 ಏಪ್ರಿಲ್ 2021, 3:57 IST
Last Updated 22 ಏಪ್ರಿಲ್ 2021, 3:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಾ.ಎ.ಕೆ.ವಾಲಿಯಾ ಅವರು ಕೋವಿಡ್‌ನಿಂದಾಗಿ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಸೋಂಕು ತಗುಲಿರುವುದು ದೃಢಪಟ್ಟ ಕೂಡಲೇ ವಾಲಿಯಾ ಅವರನ್ನು ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.

72 ವರ್ಷದ ವಾಲಿಯಾ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದರು. ದೆಹಲಿ ವಿಧಾನಸಭೆಗೆ ನಾಲ್ಕು ಬಾರಿ ಆಯ್ಕೆಯಾಗಿದ್ದರು. ಶೀಲಾ ದೀಕ್ಷಿತ್‌ ಅವರ ಸಂಪುಟದಲ್ಲಿ ಆರೋಗ್ಯ, ನಗರಾಭಿವೃದ್ಧಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ADVERTISEMENT

ದೆಹಲಿಯ ಲಕ್ಷ್ಮಿ ನಗರದಲ್ಲಿ ಕ್ಲಿನಿಕ್ ಹೊಂದಿದ್ದ ವಾಲಿಯಾ ಅವರು 1993ರಲ್ಲಿ ಮೊದಲ ಬಾರಿಗೆ ಪೂರ್ವ ದೆಹಲಿಯ ಗೀತಾ ಕಾಲೋನಿಯಿಂದ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.