ADVERTISEMENT

ಗೋವಾ ಮಾಜಿ ಸಿಎಂ ಲುಯಿಜಿನೊ ಫೆಲೇರೊ ಶಾಸಕ ಸ್ಥಾನಕ್ಕೆ ರಾಜೀನಾಮೆ

ಪಿಟಿಐ
Published 27 ಸೆಪ್ಟೆಂಬರ್ 2021, 12:43 IST
Last Updated 27 ಸೆಪ್ಟೆಂಬರ್ 2021, 12:43 IST
ಟಿಎಂಸಿ ಪಕ್ಷದ ಚಿಹ್ನೆ
ಟಿಎಂಸಿ ಪಕ್ಷದ ಚಿಹ್ನೆ   

ಪಣಜಿ: ಗೋವಾದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಲುಯಿಜಿನೊ ಫೆಲೇರೊ ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವನ್ನು ಅವರು ಸೇರುವ ಸಾಧ್ಯತೆಯಿದೆ.

ಅವರು ರಾಜೀನಾಮೆಯನ್ನು ವಿಧಾನಸಭಾ ಸ್ಪೀಕರ್ ರಾಜೇಶ್ ಪಟ್ನೇಕರ್ ಅವರಿಗೆ ಸಲ್ಲಿಸಿದರು. ಇವರ ರಾಜೀನಾಮೆಯಿಂದ, 40 ಸದಸ್ಯರಿರುವ ವಿಧಾನಸಭೆಯಲ್ಲಿ ಕಾಂಗ್ರೆಸ್ ಬಲವು 4ಕ್ಕೆ ಇಳಿದಿದೆ.

ADVERTISEMENT

ಲುಯಿಜಿನೊ ಫಲೆರೊ ನವೇಲಿಂ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನ ಚುನಾವಣೆಯ ಹಿನ್ನೆಲೆಯಲ್ಲಿ ಇತ್ತೀಚೆಗೆ ಗೋವಾ ಕಾಂಗ್ರೆಸ್‌ ಪ್ರಚಾರ ಸಮಿತಿ ಮುಖ್ಯಸ್ಥರಾಗಿ ಅವರನ್ನು ನೇಮಿಸಲಾಗಿತ್ತು.

2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 17 ಸ್ಥಾನಗಳನ್ನು ಗೆದ್ದಿತ್ತು. ಆದರೆ, ನಂತರದ ಬೆಳವಣಿಗೆಯಲ್ಲಿ ಹಲವು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿದರು. 2019ರಜುಲೈನಲ್ಲಿ 10 ಶಾಸಕರು ಪಕ್ಷ ತೊರೆದು ಆಡಳಿತಾರೂಢ ಬಿಜೆಪಿ ಸೇರಿದರು.

ರಾಜೀನಾಮೆ ನೀಡುವ ಸ್ವಲ್ಪ ಸಮಯದ ಮೊದಲು, ಫಲೇರೋ ಅವರು ನರೇಂದ್ರ ಮೋದಿ ಎದುರಿಸಲು ಮಮತಾ ಬ್ಯಾನರ್ಜಿಯಂತಹ ನಾಯಕರ ಅಗತ್ಯವಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.