ನವದೆಹಲಿ: ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರವಾಗಿ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರು ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ಬುಧವಾರ ವಿಚಾರಣೆಗೆ ಹಾಜರಾಗಿದ್ದಾರೆ.
ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ '1xBet' ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಇ.ಡಿ., ರೈನಾ ಅವರ ಹೇಳಿಕೆಗಳನ್ನು ರೆಕಾರ್ಡ್ ಮಾಡಿಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
38 ವರ್ಷದ ರೈನಾ ಅವರು '1xBet' ಜೊತೆ ನಂಟು ಹೊಂದಿದ್ದಾರೆ ಎನ್ನಲಾಗಿದೆ. ಅದನ್ನು ಬಯಲು ಮಾಡಲು ತನಿಖೆ ನಡೆಯುತ್ತಿದೆ.
ಜನರು, ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ಮೋಸ ಮಾಡಿದ ಹಾಗೂ ತೆರಿಗೆ ವಂಚಿಸಿದ ಆರೋಪಗಳಿಗೆ ಸಂಬಂಧಿಸಿದಂತೆ ಇಂತಹ ಹಲವು ಪ್ರಕರಣಗಳ ತನಿಖೆಯನ್ನು ಇ.ಡಿ. ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.