ADVERTISEMENT

ಎನ್‌ಸಿ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಆಸ್ಪತ್ರೆಗೆ ದಾಖಲು

ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ

ಪಿಟಿಐ
Published 3 ಏಪ್ರಿಲ್ 2021, 10:39 IST
Last Updated 3 ಏಪ್ರಿಲ್ 2021, 10:39 IST
ಫಾರೂಕ್ ಅಬ್ದುಲ್ಲಾ
ಫಾರೂಕ್ ಅಬ್ದುಲ್ಲಾ   

ಶ್ರೀನಗರ: ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿದ್ದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್‌ ಅಬ್ದುಲ್ಲಾ ಅವರನ್ನು ವೈದ್ಯರ ಸಲಹೆ ಮೇರೆಗೆ ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಟ್ವೀಟರ್‌ನಲ್ಲಿ ಮಾಹಿತಿ ನೀಡಿರುವ ಫಾರೂಕ್ ಅವರ ಪುತ್ರ ಒಮರ್ ಅಬ್ದುಲ್ಲಾ ‘ಸೂಕ್ತ ಚಿಕಿತ್ಸೆ ಹಾಗೂ ವೈದ್ಯಕೀಯ ಆರೈಕೆಯ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಫಾರೂಕ್ ಅಬ್ದುಲ್ಲಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ‘ ಎಂದು ಹೇಳಿದ್ದಾರೆ.

‘ನಮ್ಮ ತಂದೆಯ ಆರೋಗ್ಯ ಸುಧಾರಣೆಗಾಗಿ ಹಾರೈಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬ ಕೃತಜ್ಞತೆ ಸಲ್ಲಿಸುತ್ತಿದೆ‘ ಎಂದು ಒಮರ್ ಟ್ವೀಟ್ ಮಾಡಿದ್ದಾರೆ.

ADVERTISEMENT

85 ವರ್ಷದ ಫಾರೂಕ್ ಅಬ್ದುಲ್ಲಾ ಅವರಿಗೆ ಮಂಗಳವಾರ ಕೋವಿಡ್‌ 19 ದೃಢಪಟ್ಟಿತ್ತು. ಆರಂಭದಲ್ಲಿ ಅವರನ್ನು ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿತ್ತು. ಆದರೆ ಉತ್ತಮ ವೈದ್ಯಕೀಯ ಆರೈಕೆಗಾಗಿ ವೈದ್ಯರು ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.