ADVERTISEMENT

ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಫೆಬ್ರುವರಿ 2023, 10:44 IST
Last Updated 7 ಫೆಬ್ರುವರಿ 2023, 10:44 IST
ಉಮ್ಮನ್‌ ಚಾಂಡಿ
ಉಮ್ಮನ್‌ ಚಾಂಡಿ   

ತಿರುವನಂತಪುರ: ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದರಿಂದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಂಗ್ರೆಸ್‌ ಹಿರಿಯ ನಾಯಕ ಚಾಂಡಿ ಅವರಿಗೆ ಭಾನುವಾರ ರಾತ್ರಿ ತೀವ್ರ ಜ್ಷರ ಕಾಣಿಸಿಕೊಂಡಿತ್ತು. ಅವರನ್ನು ನಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ. ಸದ್ಯ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಚಾಂಡಿ ಅವರಿಗೆ ನ್ಯುಮೋನಿಯಾ ಹಾಗೂ ಜ್ವರ ಕಾಣಿಸಿಕೊಂಡಿತ್ತು. ಅವರಿಗೆ 79 ವರ್ಷ ವಯಸ್ಸು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.