ADVERTISEMENT

ಮಹಾರಾಷ್ಟ್ರ: ಮಾಜಿ ಗೃಹಸಚಿವ ಅನಿಲ್ ದೇಶಮುಖ್ ಇ.ಡಿ. ಎದುರು ವಿಚಾರಣೆಗೆ ಹಾಜರು

ಪಿಟಿಐ
Published 1 ನವೆಂಬರ್ 2021, 8:12 IST
Last Updated 1 ನವೆಂಬರ್ 2021, 8:12 IST
ಅನಿಲ್ ದೇಶಮುಖ್
ಅನಿಲ್ ದೇಶಮುಖ್   

ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರದ ಮಾಜಿ ಗೃಹಸಚಿವ ಅನಿಲ್‌ ದೇಶಮುಖ್ ಸೋಮವಾರ ಜಾರಿ ನಿರ್ದೇಶನಾಲಯದ(ಇ.ಡಿ) ಎದುರು ವಿಚಾರಣೆಗೆ ಹಾಜರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾಜಿ ಸಚಿವರಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದೆ ಎಂದು ಅವರು ಹೇಳಿದರು.

ಮಾಜಿ ಸಚಿವ ಅನಿಲ್‌ ದೇಶಮುಖ್‌ ವಿರುದ್ಧ ದಾಖಲಾಗಿರುವ ಬಹುಕೋಟಿ ಲಂಚ ಮತ್ತು ಸುಲಿಗೆ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣ ಕುರಿತು ಇ.ಡಿ ತನಿಖೆ ನಡೆಸುತ್ತಿದೆ.

ADVERTISEMENT

ಈ ಪ್ರಕರಣದಲ್ಲಿ ಇ.ಡಿ ವಿಚಾರಣೆಗೆ ಹಾಜರಾಗುವಂತೆ ನೀಡಿದ್ದ ನಾಲ್ಕು ನೋಟಿಸ್‌ಗಳಿಗೆ ಅನಿಲ್ ದೇಶಮುಖ್ ಪ್ರತಿಕ್ರಿಯಿಸಿರಲಿಲ್ಲ. ನಂತರ, ಮಾಜಿ ಸಚಿವರು ವಿಚಾರಣಾ ನೋಟಿಸ್‌ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಕಳೆದ ವಾರ ನಿರಾಕರಿಸಿದ ನಂತರ, ಈಗ ಇ.ಡಿ. ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.