ADVERTISEMENT

ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶ್‌ಮುಖ್ ಆಸ್ಪತ್ರೆಗೆ ದಾಖಲು

ಪಿಟಿಐ
Published 4 ಏಪ್ರಿಲ್ 2022, 12:59 IST
Last Updated 4 ಏಪ್ರಿಲ್ 2022, 12:59 IST
ಅನಿಲ್ ದೇಶಮುಖ್, ಮಹಾರಾಷ್ಟ್ರ ಮಾಜಿ ಸಚಿವ
ಅನಿಲ್ ದೇಶಮುಖ್, ಮಹಾರಾಷ್ಟ್ರ ಮಾಜಿ ಸಚಿವ   

ಮುಂಬೈ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಶದಲ್ಲಿರುವ ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಅವರು ಜೆ.ಜೆ.ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೇಶಮುಖ್ ಅವರು ಯಾವ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿಲ್ಲ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 2021ರ ನವೆಂಬರ್‌ನಲ್ಲಿ ದೇಶಮುಖ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಭ್ರಷ್ಟಾಚಾರದ ಪ್ರತ್ಯೇಕ ಪ್ರಕರಣದಲ್ಲಿ ಅವರನ್ನು ವಶಕ್ಕೆ ಪಡೆಯಲು ಮುಂಬೈ ನ್ಯಾಯಾಲಯ ಸಿಬಿಐಗೆ ಅವಕಾಶ ನೀಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.