ADVERTISEMENT

ಪಕ್ಷವಿರೋಧಿ ಚಟುವಟಿಕೆ: ಬಿಎಸ್‌ಪಿಯಿಂದ ಮಾಜಿ ಸಚಿವ ನಕುಲ್ ದುಬೆ ಉಚ್ಛಾಟನೆ

ಪಿಟಿಐ
Published 17 ಏಪ್ರಿಲ್ 2022, 4:36 IST
Last Updated 17 ಏಪ್ರಿಲ್ 2022, 4:36 IST
ಮಾಯಾವತಿ
ಮಾಯಾವತಿ   

ಲಖನೌ: ಪಕ್ಷವಿರೋಧಿ ಚಟುವಟಿಕೆ ಆರೋಪದ ಮೇರೆಗೆ ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ನಾಯಕ ಮತ್ತು ಮಾಜಿ ಸಚಿವ ನಕುಲ್ ದುಬೆ ಅವರನ್ನ ಶನಿವಾರ ಪಕ್ಷದಿಂದ ಉಚ್ಛಾಟಿಸಲಾಗಿದೆ.

ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಶುಕ್ರವಾರ ಸಂಜೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದು, 'ಅಶಿಸ್ತು ಮತ್ತು ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡ ಕಾರಣದಿಂದಾಗಿ ಮಾಜಿ ಸಚಿವ ನಕುಲ್ ದುಬೆ (ಲಖನೌ) ಅವರನ್ನು ಬಿಎಸ್‌ಪಿಯಿಂದ ಉಚ್ಛಾಟಿಸಲಾಗಿದೆ' ಎಂದು ತಿಳಿಸಿದ್ದಾರೆ.

ಬಿಎಸ್‌ಪಿಯಲ್ಲಿ ದುಬೆ ಅವರು ಬ್ರಾಹ್ಮಣ ಸಮುದಾಯದ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು. 2007ರ ಬಿಎಸ್‌ಪಿ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.