ADVERTISEMENT

ಎರಡು ವರ್ಷಗಳ ಹಿಂದೆ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದ ಮಾಜಿ ಶಾಸಕನ ಬಂಧನ

ಬಂಧಿತನಿಗೆ ಜ.4ರವರೆಗೆ ನ್ಯಾಯಾಂಗ ಬಂಧನ

ಪಿಟಿಐ
Published 22 ಡಿಸೆಂಬರ್ 2020, 10:54 IST
Last Updated 22 ಡಿಸೆಂಬರ್ 2020, 10:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಎರಡು ವರ್ಷಗಳ ಹಿಂದೆ ಉತ್ತರ ಪ್ರದೇಶದ ಪೊಲೀಸ್ ವಶದಿಂದ ತಪ್ಪಿಸಿಕೊಂಡಿದ್ದ ಮಾಜಿ ಶಾಸಕ ರಮ್‌ಬೀರ್ ಶೋಕೀನ್‌ನನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿ ನಂತರ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ನ್ಯಾಯಾಧೀಶರು, ಶೋಕೀನ್‌ರನ್ನು ಜ.4 ವರೆಗೆ ನ್ಯಾಯಾಂಗ ಬಂಧನ ಶಿಕ್ಷೆ ವಿಧಿಸಿದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

2013ರಲ್ಲಿ ದೆಹಲಿ ವಿಧಾನಸಭೆಗೆ ಚುನಾಯಿತರಾಗಿದ್ದ ಶೋಕೀನ್, ತಮ್ಮ ರಾಜಕೀಯ ಮಹಾತ್ವಾಕಾಂಕ್ಷೆಗಳನ್ನು ಪೂರೈಸಿಕೊಳ್ಳಲು ಅಪರಾಧಿಗಳ ಪ್ರಭಾವವನ್ನು ಬಳಸಿಕೊಂಡಿದ್ದರು ಎಂಬ ಆರೋಪಗಳು ಕೇಳಿಬಂತು. ನಂತರ ಆಗಸ್ಟ್ 2015 ರಲ್ಲಿ ಅವರನ್ನು ಎಂಸಿಒಸಿಎ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿಸಲಾಯಿತು. ನಂತರ 9 ಎಂಎಂ ಪಿಸ್ತೂಲ್ ಮತ್ತು ಎರಡು ಲೈವ್ ಕಾಟ್ರಿಡ್ಜ್‌ಗಳನ್ನು ಅಕ್ರಮವಾಗಿ ಹೊಂದಿದ್ದ ಎಂಬ ಕಾರಣಕ್ಕೆ ಶೌಕೀನನ್ನನು ನವೆಂಬರ್ 27, 2016 ರಂದು ಬಂಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಮತ್ತೆ ಶೋಕೀನ್‌ನನ್ನು ಎಂಸಿಒಸಿಎ ಪ್ರಕರಣದಲ್ಲಿ ಡಿಸೆಂಬರ್ 1, 2016 ರಂದು ಅವರನ್ನು ಬಂಧಿಸಲಾಯಿತು ಮತ್ತು ಮಾರ್ಚ್ 8, 2017 ರಂದು ಆತನ ವಿರುದ್ಧ ಆರೋಪ ಪಟ್ಟಿ ದಾಖಲಿಸಲಾಯಿತು. ಸೆಪ್ಟೆಂಬರ್ 26, 2018 ರಂದು ಉತ್ತರ ಪ್ರದೇಶ ಪೊಲೀಸರ ವಶದಿಂದ ಸಫ್ದರ್ಜಂಗ್ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದರು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.