ನವದೆಹಲಿ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮಾಜಿ ಸಂಸದ ಮಜೀದ್ ಮೆಮನ್ ಇಂದು (ಬುಧವಾರ) ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ (ಟಿಎಂಸಿ) ಸೇರ್ಪಡೆಯಾಗಿದ್ದಾರೆ.
ದೆಹಲಿಯಲ್ಲಿರುವ ಟಿಎಂಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಟಿಎಂಸಿ ನಾಯಕರಾದ ಡೆರೆಕ್ ಒಬ್ರಿಯನ್ ಹಾಗೂ ಸೌಗತ ರಾಯ್ ಅವರು ಮಜೀದ್‌ರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಮಜೀದ್ ಟಿಎಂಸಿ ಸೇರ್ಪಡೆ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಬೆಂಬಲಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನವೆಂಬರ್‌ನಲ್ಲಿ ಮಜೀದ್ ಮೆಮನ್ ಎನ್‌ಸಿಪಿ ತೊರೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.