ADVERTISEMENT

ಎನ್ಎಸ್ಇ ಮಾಜಿ ಸಿಇಒ ರವಿ ನಾರಾಯಣ ಬಂಧನ

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿಯಿಂದ ಸೆರೆ

ಪಿಟಿಐ
Published 6 ಸೆಪ್ಟೆಂಬರ್ 2022, 22:08 IST
Last Updated 6 ಸೆಪ್ಟೆಂಬರ್ 2022, 22:08 IST

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ನ ಮಾಜಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ(ಸಿಇಒ) ಹಾಗೂ ವ್ಯವಸ್ಥಾಪಕ ನಿರ್ದೇಶಕ ರವಿ ನಾರಾಯಣ್‌ ಅವರನ್ನು ಜಾರಿ ನಿರ್ದೇಶನಾಲಯ ಮಂಗಳವಾರ ಬಂಧಿಸಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಟ್ಯಾಪಿಂಗ್ ಪ್ರಕರಣದಲ್ಲಿ ನಾರಾಯಣ್‌ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಅವರು 1994ರ ಏಪ್ರಿಲ್‌ನಿಂದ 2013ರ ಮಾರ್ಚ್ 31ರವರೆಗೆ ಎನ್ಎಸ್ಇಯ ಕಾರ್ಯ ನಿರ್ವಾಹಕ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.
ಆ ಬಳಿಕ 2013ರಿಂದ 2017ರವರೆಗೆ ಅವರನ್ನು ಕಾರ್ಯಕಾರಿಯೇತರ ಉಪ ಮುಖ್ಯಸ್ಥರಾಗಿ ನೇಮಕವಾಗಿದ್ದರು.

ADVERTISEMENT

ಇದಕ್ಕೂ ಮುಂಚೆ ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಎನ್ಎಸ್ಇಯ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಸಿಇಒ ಚೈತ್ರ ರಾಮಕೃಷ್ಣನ್ ಅವರನ್ನು ಬಂಧಿಸಿತ್ತು.

ಅಲ್ಲದೆ, ಮುಂಬೈ ಮಾಜಿ ಪೊಲೀಸ್ ಆಯುಕ್ತ ಸಂಜಯ್ ಪಾಂಡೆ ಅವರನ್ನು ಸಹ ಅಕ್ರಮ ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಇ.ಡಿ ಬಂಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.