
ಇಸ್ಲಾಮಾಬಾದ್: ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮ ಬಲಗಣ್ಣಿನ ದೃಷ್ಟಿಯನ್ನು ಕಳೆದುಕೊಂಡಿದ್ದಾರೆ ಎಂದು ಅವರ ವಕೀಲರು ಮತ್ತು ಕುಟುಂಬದವರು ತಿಳಿಸಿದ್ದಾರೆ.
ಖಾನ್ ಅವರು 2023ರಿಂದಲೂ ಜೈಲಿನಲ್ಲಿದ್ದು, ಈ ಬೆಳವಣಿಗೆಯು ಅವರ ಆರೋಗ್ಯದ ಬಗ್ಗೆ ಕಳವಳ ಸೃಷ್ಟಿಸಿದೆ.
ಸುಪ್ರೀಂ ಕೋರ್ಟ್‌ನ ಸೂಚನೆಯಂತೆ ವಕೀಲ ಸಲ್ಮಾನ್ ಸಫ್ದರ್ ಅವರು ಇಮ್ರಾನ್ ಅವರನ್ನು ಜೈಲಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಮ್ರಾನ್ ಭೇಟಿ ಬಳಿಕ ಸಲ್ಮಾನ್ ಅವರು ಸುಪ್ರೀಂ ಕೋರ್ಟ್‌ಗೆ ವರದಿಯೊಂದನ್ನು ಸಲ್ಲಿಸಿದ್ದಾರೆ. ಅದರಲ್ಲಿ ತಮ್ಮ ಕಕ್ಷಿದಾರನಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಬೇಕು ಎಂದು ಕೋರಿದ್ದಾರೆ.
‘ಮಾಜಿ ಪ್ರಧಾನಿಯ ಬಲಗಣ್ಣು ಕೇವಲ ಶೇ 15ರಷ್ಟು ದೃಷ್ಟಿಯ ಸಾಮರ್ಥ್ಯವನ್ನು ಹೊಂದಿದೆ’ ಎಂದು ಸಫ್ದರ್ ಅವರು ಇಸ್ಲಾಮಾಬಾದ್‌ನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
‘ವೈದ್ಯಕೀಯ ನಿರ್ಲಕ್ಷ್ಯದಿಂದಲೇ ನಮ್ಮ ತಂದೆಯವರ ಕಣ್ಣಿನ ದೃಷ್ಟಿ ಹೋಗಿದೆ’ ಎಂದು ಇಮ್ರಾನ್ ಪುತ್ರ ಕಾಸಿಮ್ ಖಾನ್ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.