ADVERTISEMENT

ವಾಜಪೇಯಿ ಸೋದರ ಸಂಬಂಧಿ ಕರುಣಾ ಶುಕ್ಲಾ ಕೋವಿಡ್‌ನಿಂದ ನಿಧನ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2021, 5:29 IST
Last Updated 27 ಏಪ್ರಿಲ್ 2021, 5:29 IST
ಕರುಣಾ ಶುಕ್ಲಾ
ಕರುಣಾ ಶುಕ್ಲಾ   

ರಾಯಪುರ: ಮಾಜಿ ಪ್ರಧಾನಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರು ಸೋದರ ಸಂಬಂಧಿ ಹಾಗೂ ಕಾಂಗ್ರೆಸ್‌ ನಾಯಕಿ ಕರುಣಾ ಶುಕ್ಲಾ ಸೋಮವಾರ ತಡರಾತ್ರಿ ನಿಧನರಾದರು. ಅವರಿಗೆ 70ವರ್ಷ ವಯಸ್ಸಾಗಿತ್ತು.

ಕರುಣಾ ಶುಕ್ಲಾ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿತ್ತು. ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಕರುಣಾ ಶುಕ್ಲಾ ಮೃತಪಟ್ಟರು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

32 ವರ್ಷಗಳ ಕಾಲ ಅವರು ಛತ್ತೀಸಗಡ ಬಿಜೆಪಿಯಲ್ಲಿ ಸೇವೆ ಸಲ್ಲಿಸಿದ್ದರು. ಎರಡು ಸಲ ಲೋಕಸಭೆ ಸದಸ್ಯೆಯಾಗಿ ಆಯ್ಕೆಯಾಗಿದ್ದರು.

ADVERTISEMENT

ಬಿಜೆಪಿಯಲ್ಲಿ ಉನ್ನತ ಸ್ಥಾನಮಾನಗಳು ದೊರೆಯಲಿಲ್ಲ ಎಂದು ಅಸಮಾಧಾನಗೊಂಡು 2013ರಲ್ಲಿ ಕಾಂಗ್ರೆಸ್‌ ಪಕ್ಷ ಸೇರಿದ್ದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ರಮಣ್‌ ಸಿಂಗ್‌ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.