ADVERTISEMENT

ನೀರಜ್‌ ಶೇಖರ್‌ ಬಿಜೆಪಿಗೆ

ಪಿಟಿಐ
Published 16 ಜುಲೈ 2019, 17:18 IST
Last Updated 16 ಜುಲೈ 2019, 17:18 IST
ನೀರಜ್‌
ನೀರಜ್‌   

ನವದೆಹಲಿ: ಮಾಜಿ ಪ್ರಧಾನಿ ಚಂದ್ರಶೇಖರ್‌ ಅವರ ಪುತ್ರ ನೀರಜ್‌ ಶೇಖರ್‌ ಮಂಗಳವಾರ ಬಿಜೆಪಿ ಸೇರ್ಪಡೆಯಾದರು.

ಸಮಾಜವಾದಿ ಪಕ್ಷದಿಂದ (ಎಸ್‌ಪಿ) ರಾಜ್ಯಸಭೆಗೆ ಆಯ್ಕೆಯಾಗಿದ್ದ ನೀರಜ್‌ ಅವರು ಸೋಮವಾರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ರಾಜ್ಯಸಭೆಯ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದರು.

2007ರ ಉಪಚುನಾವಣೆ ಹಾಗೂ 2009ರ ಲೋಕಸಭಾ ಚುನಾವಣೆಯಲ್ಲಿ ನೀರಜ್‌ ಅವರು ಉತ್ತರಪ್ರದೇಶದ ಬಲಿಯಾ ಲೋಕಸಭಾ ಕ್ಷೇತ್ರದಿಂದ ಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. 2014ರಲ್ಲಿ ಅವರಿಗೆ ಪಕ್ಷ ಟಿಕೆಟ್‌ ನೀಡಿರಲಿಲ್ಲ. ಆದರೆ ಚುನಾವಣೆಯ ಕೆಲವೇ ತಿಂಗಳ ಬಳಿಕ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿತ್ತು. 2019ರ ಲೋಕಸಭಾ ಚುನಾವಣೆಯಲ್ಲೂ ಸ್ಪರ್ಧಿಸಲು ನೀರಜ್‌ ಬಯಸಿದ್ದರು. ಆದರೆ ಪಕ್ಷ ಟಿಕೆಟ್‌ ನಿರಾಕರಿಸಿತ್ತು. ಪಕ್ಷದಲ್ಲಿ ತನ್ನನ್ನು ಕಡೆಗಣಿಸಲಾಗುತ್ತದೆ ಎಂಬ ಆರಣಕ್ಕೆ ಅವರು ಬೇಸರಗೊಂಡು ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.

ADVERTISEMENT

ಮಂಗಳವಾರ ಬಿಜೆಪಿಯ ಕಾರ್ಯದರ್ಶಿಗಳಾದ ಭೂಪೇಂದ್ರ ಯಾದವ್‌ ಹಾಗೂ ಅನಿಲ್‌ ಜೈನ್‌ ಅವರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾದರು. ಶೀಘ್ರದಲ್ಲೇ ನೀರಜ್‌ ಅವರು ಉತ್ತಪ್ರದೇಶದಿಂದ ಬಿಜೆಪಿಯ ಅಭ್ಯರ್ಥಿಯಾಗಿ ರಾಜ್ಯಸಭೆಗೆ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.