ADVERTISEMENT

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಕೋವಿಡ್‌ನಿಂದ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

ಏಜೆನ್ಸೀಸ್
Published 29 ಏಪ್ರಿಲ್ 2021, 10:47 IST
Last Updated 29 ಏಪ್ರಿಲ್ 2021, 10:47 IST
ಮನಮೋಹನ್ ಸಿಂಗ್
ಮನಮೋಹನ್ ಸಿಂಗ್    

ನವದಹೆಲಿ: ಕೋವಿಡ್ ಸೋಂಕಿಗೆ ತುತ್ತಾಗಿ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಚೇತರಿಸಿಕೊಂಡಿದ್ದು, ಗುರುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸೋಂಕು ಕಾಣಿಸಿಕೊಂಡ ಕಾರಣಕ್ಕೆ ಏ.19ರಂದು ಆಸ್ಪತ್ರೆಗೆ ದಾಖಲಾಗಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌, ‘ಮನಮೋಹನ್‌ ಸಿಂಗ್‌ ಅವರ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಕುರಿತ ಎಲ್ಲ ವಿವರವನ್ನು ತಜ್ಞ ವೈದ್ಯರ ಜತೆ ಚರ್ಚಿಸಲಾಗಿದೆ’ ಎಂದು ಹೇಳಿದ್ದರು.

ADVERTISEMENT

ಇತ್ತೀಚೆಗೆ ದೇಶದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವಂತೆ ಮನಮೋಹನ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.