ADVERTISEMENT

ಪ್ರಣವ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ: ವೆಂಟಿಲೇಟರ್‌ ಚಿಕಿತ್ಸೆ ಮುಂದುವರಿಕೆ

ಏಜೆನ್ಸೀಸ್
Published 15 ಆಗಸ್ಟ್ 2020, 9:39 IST
Last Updated 15 ಆಗಸ್ಟ್ 2020, 9:39 IST
   

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್‌‌ ಮುಖರ್ಜಿ ಅವರಿಗೆ ವೆಂಟಿಲೇಟರ್‌ ನೆರವಿನಿಂದೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್‌ ಆಸ್ಪತ್ರೆಯ ವೈದ್ಯರು ಶನಿವಾರ ತಿಳಿಸಿದ್ದಾರೆ.

‘ಪ್ರಣವ್‌ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಈ ದಿನವೂ ಬದಲಾಗಿಲ್ಲ. ಆವರಿಗೆ ವೆಂಟಿಲೇಟರ್‌ ನೆರವಿನೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ತಜ್ಞರ ತಂಡವು ನಿಯಮಿತವಾಗಿ ಅವರ ಮೇಲ್ವಿಚಾರಣೆ ನಡೆಸುತ್ತಿದೆ’ ಎಂದು ಆಸ್ಪತ್ರೆ ಪ್ರಕಟಣೆ ಹೊರಡಿಸಿದೆ.

ಪ್ರಣವ್‌ ಅವರು ವಿಧಿವಶರಾಗಿದ್ದಾರೆ ಎಂದು #ripPranabMukherjee ಎಂಬ ಹ್ಯಾಷ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿತ್ತು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಪ್ರಣವ್ ಪುತ್ರ ಅಭಿಜಿತ್ ಮುಖರ್ಜಿ, ‘ನನ್ನ ತಂದೆ ಪ್ರಣವ್ಮುಖರ್ಜಿ ಇನ್ನೂ ಜೀವಂತವಾಗಿದ್ದಾರೆ ಮತ್ತು ಆರೋಗ್ಯ ಸ್ಥಿತಿಸ್ಥಿರವಾಗಿದೆ. ಹೆಸರಾಂತ ಪತ್ರಕರ್ತರು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತಿರುವ ಊಹಾಪೋಹಗಳು ಮತ್ತು ಸುಳ್ಳುಸುದ್ದಿಗಳು ಭಾರತದಲ್ಲಿ ಮಾಧ್ಯಮವು ಸುಳ್ಳುಸುದ್ದಿಗಳ ಕಾರ್ಖಾನೆಯಾಗಿ ಮಾರ್ಪಟ್ಟಿದೆ ಎಂಬುದನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ’ ಎಂದು ಟ್ವೀಟ್ ಮಾಡಿದ್ದರು.

ADVERTISEMENT

‘ದೇವರು ತಂದೆಗೆ ಒಳಿತು ಮಾಡಲಿ. ಏನೇ ಆದರೂ ಎದುರಿಸಲು ನನಗೆ ಶಕ್ತಿಯನ್ನು ನೀಡಲಿ’ ಎಂದು ಪುತ್ರಿ ಶರ್ಮಿಷ್ಠಾ ಮುಖರ್ಜಿ ಬುಧವಾರಟ್ವೀಟ್ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.