ADVERTISEMENT

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಯಿಂದ ಬಿಡುಗಡೆ

ಏಜೆನ್ಸೀಸ್
Published 12 ಮೇ 2020, 8:05 IST
Last Updated 12 ಮೇ 2020, 8:05 IST
ಡಾ.ಮನಮೋಹನ್ ಸಿಂಗ್
ಡಾ.ಮನಮೋಹನ್ ಸಿಂಗ್   

ನವದೆಹಲಿ: ಅನಾರೋಗ್ಯದಿಂದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ಏಮ್ಸ್‌) ದಾಖಲಾಗಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಔಷಧಿಯ ಅಡ್ಡಪರಿಣಾಮದಿಂದ ಜ್ವರದಿಂದ ಬಳಲುತ್ತಿದ್ದ ಅವರು ಚೇತರಿಸಿಕೊಂಡಿದ್ದಾರೆ. ಅವರನ್ನು ಶೀಘ್ರ ಮನೆಗೆ ಕಳುಹಿಸಲಾಗುವುದು ಎಂದು ಏಮ್ಸ್‌ ಸೋಮವಾರ ರಾತ್ರಿ ತಿಳಿಸಿತ್ತು.ಅವರಿಗೆ ಕೊರೊನಾ ಸೋಂಕು ಪತ್ತೆ ತಪಾಸಣೆ ನಡೆಸಲಾಗಿದ್ದು, ಸೋಂಕು ತಗುಲಿಲ್ಲ ಎಂಬುದು ದೃಢಪಟ್ಟಿದೆ.

ಎದೆ ನೋವು ಕಾಣಿಸಿಕೊಂಡಿದ್ದರಿಂದ 87 ವರ್ಷ ವಯಸ್ಸಿನ ಅವರನ್ನು ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದ್ರೋಗ ತಜ್ಞ ಡಾ. ನಿತೀಶ್‌ ನಾಯ್ಕ್‌ ಅವರು ಸಿಂಗ್‌ ಅವರಿಗೆ ಚಿಕಿತ್ಸೆ ನೀಡಿದ್ದಾರೆ. ಮನಮೋಹನ್ ಸಿಂಗ್ ಅವರಿಗೆ 2009ರಲ್ಲಿ ಹೃದಯದ ಬೈಪಾಸ್‌ ಶಸ್ತ್ರಚಿಕಿತ್ಸೆ ಆಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.