ADVERTISEMENT

ರಾಜಸ್ಥಾನ ಮಾಜಿ ಸಿಎಂ ಅಶೋಕ್ ಗೆಹಲೋತ್‌ಗೆ ಕೋವಿಡ್‌, ಎಚ್‍1 ಎನ್‍1 ಜ್ವರ ದೃಢ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಫೆಬ್ರುವರಿ 2024, 3:22 IST
Last Updated 3 ಫೆಬ್ರುವರಿ 2024, 3:22 IST
<div class="paragraphs"><p> ಅಶೋಕ್ ಗೆಹಲೋತ್</p></div>

ಅಶೋಕ್ ಗೆಹಲೋತ್

   

ಜೈಪುರ: ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ ಅವರಿಗೆ ಕೋವಿಡ್-19 ಹಾಗೂ ಎಚ್‌1 ಎನ್‌1 ಜ್ವರ ಧೃಡಪಟ್ಟಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಗೆಹಲೋತ್‌, ಬದಲಾಗುತ್ತಿರುವ ಹವಮಾನ ವೈಪರೀತ್ಯದಿಂದಾಗಿ ಜನರು ತಮ್ಮ ಆರೋಗ್ಯ ಕಡೆ ಹೆಚ್ಚು ಗಮನಹರಿಸಬೇಕೆಂದು ಸಲಹೆ ನೀಡಿದ್ದಾರೆ.

ADVERTISEMENT

'ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದೆ. ಶುಕ್ರವಾರ( ಫೆ.2) ರಂದು ವೈದ್ಯರ ಸಲಹೆಯಂತೆ ಕೋವಿಡ್‌–19 ಪರೀಕ್ಷೆ ಮತ್ತು ಇತರೆ ರಕ್ತ ಪರೀಕ್ಷೆ ಮಾಡಿಸಿಕೊಂಡ ಬಳಿಕ ಕೋವಿಡ್‌ ಹಾಗೂ ಎಚ್‌1ಎನ್‌1 ಜ್ವರ ಧೃಡಪಟ್ಟಿದೆ. ಮುಂದಿನ ಒಂದು ವಾರದವರೆಗೂ ಯಾರನ್ನೂ ಭೇಟಿ ಮಾಡಲು ಸಾಧ್ಯವಾಗುವುದಿಲ್ಲ’ ಎಂದು ಗೆಹಲೋತ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.