ADVERTISEMENT

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಜಗನ್ನಾಥ್‌ ಪಹಾಡಿಯಾ ಕೋವಿಡ್‌ನಿಂದ ನಿಧನ

ಪಿಟಿಐ
Published 20 ಮೇ 2021, 6:49 IST
Last Updated 20 ಮೇ 2021, 6:49 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಜೈಪುರ: ಕೋವಿಡ್‌ನಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಜಗನ್ನಾಥ್‌ ಪಹಾಡಿಯಾ (89) ಬುಧವಾರ ರಾತ್ರಿ ನಿಧನರಾದರು.

ಜಗನ್ನಾಥ್‌ ಅವರು 1980–81ರಲ್ಲಿ ರಾಜಸ್ಥಾನದ ಮುಖ್ಯಮಂತ್ರಿಯಾಗಿದ್ದರು. ಹರಿಯಾಣ ಮತ್ತು ಬಿಹಾರದಲ್ಲಿ ರಾಜ್ಯಪಾಲರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌, ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ADVERTISEMENT

ಶೋಕಾಚರಣೆ ಕಾರಣ ಗುರುವಾರ ರಾಜ್ಯ ಸರ್ಕಾರದ ಎಲ್ಲಾ ಕಚೇರಿಗಳು ಮುಚ್ಚಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.