
ಪಿಟಿಐ
ತಿರುವನಂತಪುರ: ಶಬರಿಮಲೆ ಚಿನ್ನ ಕಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮಾಜಿ ಸದಸ್ಯ ಕೆ.ಪಿ. ಶಂಕರ ದಾಸ್ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬಂಧಿಸಿದ್ದಾರೆ.
ದ್ವಾರಪಾಲಕ ಮೂರ್ತಿಗಳ ಚಿನ್ನ ಲೇಪಿತ ತಾಮ್ರದ ಕವಚಗಳು ಮತ್ತು ಶ್ರೀಕೋವಿಲ್ ಬಾಗಿಲಿನ ಚೌಕಟ್ಟುಗಳ ಚಿನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಸ್ ಅವರನ್ನು ಏಕೆ ಬಂಧಿಸಿಲ್ಲ ಎಂದು ಕೇರಳ ಹೈಕೋರ್ಟ್ ಪ್ರಶ್ನಿಸಿದ ಒಂದು ದಿನದ ನಂತರ ಈ ಬಂಧನವಾಗಿದೆ. ದಾಸ್ ಅವರು ಈ ಎರಡೂ ಪ್ರಕರಣಗಳಲ್ಲಿ ಬಂಧಿತರಾದ 12ನೇ ಆರೋಪಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.