ADVERTISEMENT

ಶಬರಿಮಲೆ ಚಿನ್ನ ಕಳವು: ವಾಸುಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 16:24 IST
Last Updated 11 ಫೆಬ್ರುವರಿ 2026, 16:24 IST
.
.   

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಚಿನ್ನ ಕಳವು ಪ್ರಕರಣದಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷ ಎನ್‌.ವಾಸು ಅವರಿಗೆ ಬುಧವಾರ ಜಾಮೀನು ಲಭಿಸಿದೆ.

ವಾಸು ಅವರ ಬಂಧನವಾಗಿ 90 ದಿನ ಕಳೆದರೂ ದೋಷಾರೋಪ ಪಟ್ಟಿ ಸಲ್ಲಿಕೆಯಾಗದ ಕಾರಣ ಕೊಲ್ಲಂನ ವಿಚಕ್ಷಣಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್‌ ಪೊಟ್ಟಿ ಸೇರಿದಂತೆ ನಾಲ್ವರು ಆರೋಪಿಗಳಿಗೆ ಈಗಾಗಲೇ ಜಾಮೀನು ಲಭಿಸಿದೆ. ಪ್ರಕರಣದ ತನಿಖೆಯ ದಾರಿ ತಪ್ಪಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮತ್ತು ಬಿಜೆಪಿ ನಿರಂತರವಾಗಿ ಆರೋಪಿಸುತ್ತಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.