ADVERTISEMENT

ಕಾಂಗ್ರೆಸ್‌ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಶಿವರಾಜ ಪಾಟೀಲ್ ನಿಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಡಿಸೆಂಬರ್ 2025, 5:16 IST
Last Updated 12 ಡಿಸೆಂಬರ್ 2025, 5:16 IST
<div class="paragraphs"><p>ಶಿವರಾಜ ಪಾಟೀಲ್</p></div>

ಶಿವರಾಜ ಪಾಟೀಲ್

   

ನವದೆಹಲಿ: ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ ಪಾಟೀಲ್(90) ಅವರು ಅನಾರೋಗ್ಯದಿಂದ ಇಂದು(ಶುಕ್ರವಾರ) ಮಹಾರಾಷ್ಟ್ರದ ಲಾತೂರಿನಲ್ಲಿ ನಿಧನರಾದರು.

ಲಾತೂರ್‌ ಲೋಕಸಭಾ ಕ್ಷೇತ್ರವನ್ನು ಹಲವು ಬಾರಿ ಗೆದ್ದಿದ್ದ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಲೋಕಸಭೆಯ ಸ್ಪೀಕರ್ ಸೇರಿದಂತೆ ಕೇಂದ್ರ ಸಚಿವ ಸಂಪುಟದಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು.

ADVERTISEMENT

1972ರಲ್ಲಿ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು, 1980ರಲ್ಲಿ ರಾಷ್ಟ್ರ ರಾಜಕಾರಣಕ್ಕೆ ಕಾಲಿಟ್ಟಿದ್ದರು. ಲಾತೂರ್ ಕ್ಷೇತ್ರದಿಂದ ಸಂಸತ್ ಸದಸ್ಯರಾಗಿ ಆಯ್ಕೆಯಾದ ಅವರು, ಇಂದಿರಾ ಗಾಂಧಿ ಸರ್ಕಾರದಲ್ಲಿ 1980-82 ರವರೆಗೆ ರಕ್ಷಣಾ ಖಾತೆ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

2004ರ ಲೋಕಸಭಾ ಚುನಾವಣೆಯಲ್ಲಿ ಸೋತರೂ ಕೇಂದ್ರ ಗೃಹ ಸಚಿವ ಹುದ್ದೆಯನ್ನು ಅಲಂಕರಿಸಿದ್ದ ಪಾಟೀಲ್‌, 26/11 ಮುಂಬೈ ದಾಳಿಯ ನೈತಿಕ ಹೊಣೆ ಹೊತ್ತು 2008ರ ನವೆಂಬರ್ 30ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.