ADVERTISEMENT

ತಮಿಳುನಾಡು | 4ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2025, 9:41 IST
Last Updated 7 ಫೆಬ್ರುವರಿ 2025, 9:41 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ಚೆನ್ನೈ: ತಮಿಳುನಾಡಿನ ತಿರುಚಿರಾಪಳ್ಳಿಯ ಖಾಸಗಿ ಶಾಲೆಯೊಂದರಲ್ಲಿ 4ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಾಲೆಯ ಮುಖ್ಯಸ್ಥೆ, ಆಕೆಯ ಪತಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ತಿರುಚಿರಾಪಳ್ಳಿ ಜಿಲ್ಲೆಯ ಮಣಪ್ಪರೈನಲ್ಲಿ ಈ ಘಟನೆ ನಡೆದಿದೆ .

ADVERTISEMENT

ಈ ಪ್ರಕರಣದಲ್ಲಿ ಶಾಲೆಯ ಮುಖ್ಯಸ್ಥೆಯ ಪತಿಯೇ ಪ್ರಮುಖ ಆರೋಪಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಆರೋಪಿಯ ಹುಡುಕಾಟದಲ್ಲಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ವಿರುದ್ಧ ಬಾಲಕಿಯ ಸಂಬಂಧಿಕರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಶಾಲೆಯ ಕಿಟಕಿ ಗಾಜುಗಳನ್ನು ಹೊಡೆದುಹಾಕಿದ್ದಾರೆ. ಶಾಲೆಯ ಬಳಿ ಇದ್ದ ಹೂ ಕುಂಡಗಳು ಸೇರಿದಂತೆ ವಾಹನಗಳಿಗೂ ಹಾನಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.