ADVERTISEMENT

ಜಾರ್ಖಂಡ್‌ನಲ್ಲಿ ಅಕ್ರಮ ಕಲ್ಲಿದ್ದಲು ಗಣಿ ಕುಸಿತ: 4 ಸಾವು

ಪಿಟಿಐ
Published 1 ಫೆಬ್ರುವರಿ 2022, 16:10 IST
Last Updated 1 ಫೆಬ್ರುವರಿ 2022, 16:10 IST
ಜಾರ್ಖಂಡ್‌ನಲ್ಲಿ ಅಕ್ರಮ ಕಲ್ಲಿದ್ದಲು ಗಣಿ ಕುಸಿತ
ಜಾರ್ಖಂಡ್‌ನಲ್ಲಿ ಅಕ್ರಮ ಕಲ್ಲಿದ್ದಲು ಗಣಿ ಕುಸಿತ   

ಧನ್‌ಬಾದ್: ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಸಂದರ್ಭದಲ್ಲಿ ಮೂರು ಕಲ್ಲಿದ್ದಲು ಗಣಿಗಳು ಕುಸಿದು ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಹಲವರು ಸಿಲುಕಿದ್ದಾರೆಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ನಿರ್ಸಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್‌ನ (ಇಸಿಎಲ್) ಗೋಪಿನಾಥಪುರ ಓಪನ್ ಕಾಸ್ಟ್ ಪ್ರಾಜೆಕ್ಟ್‌ನಿಂದ (ಒಸಿಪಿ) ಕಲ್ಲಿದ್ದಲು ಕಂಪನಿಗಳಿಂದ ನೇಮಕಗೊಂಡ ರಕ್ಷಣಾ ತಂಡದಿಂದ ಮೂವರು ಮಹಿಳೆಯರು ಹಾಗೂ ಒಬ್ಬ ಬಾಲಕಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಧನ್‌ಬಾದ್‌ನ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಪ್ರೇಮ್ ಕುಮಾರ್ ತಿವಾರಿ ತಿಳಿಸಿದ್ದಾರೆ.

ಸೋಮವಾರ ಸಂಜೆ 5ರ ಹೊತ್ತಿಗೆ ಕಪಸಾರ ಗಣಿ ಕುಸಿದಿದೆ. ತಡರಾತ್ರಿ ಭಾರತ್ ಕೋಕಿಂಗ್ ಕೋಲ್ ಲಿಮಿಟಿಡ್‌ನ (ಬಿಸಿಸಿಎಲ್) ಚಾಚ್ ವಿಕ್ಟೋರಿಯಾ ಮತ್ತು ಗೋಪಿನಾಥಪುರದಲ್ಲಿ ಮಂಗಳವಾರ ಬೆಳಿಗ್ಗೆ ಮೂರನೇ ಗಣಿ ಕುಸಿದಿದೆ.

ADVERTISEMENT

ಗಣಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಜಾರ್ಖಂಡ್ ಮುಖ್ಯಮತ್ರಿ ಹೇಮಂತ್ ಸೊರೆನ್, ಪರಿಹಾರ ಹಾಗೂ ರಕ್ಷಣಾ ಕಾರ್ಯದಲ್ಲಿ ಜಿಲ್ಲಾಡಳಿತವು ಸಕ್ರಿಯವಾಗಿದೆ ಎಂದು ತಿಳಿಸಿದ್ದಾರೆ.

ಗಣಿಯಲ್ಲಿ ಹಲವರುಸಿಲುಕಿರುವ ಬಗ್ಗೆ ಶಂಕೆ ಇದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಭೀತಿ ಕಾಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.