ADVERTISEMENT

ಸುಪ್ರೀಂ ಕೋರ್ಟ್‌ಗೆ ನಾಲ್ವರು ನ್ಯಾಯಮೂರ್ತಿಗಳ ನೇಮಕ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2018, 20:10 IST
Last Updated 1 ನವೆಂಬರ್ 2018, 20:10 IST
   

ನವದೆಹಲಿ:ನಾಲ್ಕು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳನ್ನು ಗುರುವಾರ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ. ನೇಮಕ ಕುರಿತು ಕೊಲಿಜಿಯಂ ಶಿಫಾರಸು ಮಾಡಿದ 48 ಗಂಟೆಗಳಲ್ಲಿ ಕೇಂದ್ರ ಕಾನೂನು ಸಚಿವಾಲಯ ಆದೇಶ ಹೊರಡಿಸಿದೆ.

ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯ್‌ ನೇತೃತ್ವದ ಕೊಲಿಜಿಯಂ ವ್ಯವಸ್ಥೆಯು ನ್ಯಾಯಮೂರ್ತಿಗಳಾದ ಹೇಮಂತ್‌ ಗುಪ್ತಾ, ಅಜಯ್‌ ರಸ್ತೋಗಿ, ಎಂ.ಆರ್. ಶಾ ಹಾಗೂ ಆರ್. ಸುಭಾಷ್‌ ರೆಡ್ಡಿ ಅವರ ಹೆಸರನ್ನು ಮಂಗಳವಾರ ಶಿಫಾರಸು ಮಾಡಿತ್ತು.

ನ್ಯಾಯಮೂರ್ತಿ ಗುಪ್ತಾ ಮಧ್ಯಪ್ರದೇಶ, ರಸ್ತೋಗಿ ತ್ರಿಪುರಾ, ಶಾ ಅವರು ಪಟ್ನಾ ಹಾಗೂ ರೆಡ್ಡಿ ಅವರು ಗುಜರಾತ್‌ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಯಾಗಿದ್ದರು.

ADVERTISEMENT

ಈ ಹೈಕೋರ್ಟ್‌ಗಳಿಗೆ ಹಂಗಾಮಿ ಮುಖ್ಯನ್ಯಾಯಮೂರ್ತಿಗಳ ನೇಮಕ ಕುರಿತು ಸಚಿವಾಲಯವು ಈಗಾಗಲೇ ಅಧಿಸೂಚನೆ ಹೊರಡಿಸಿದೆ.

ನಾಲ್ವರು ನೂತನ ನ್ಯಾಯಮೂರ್ತಿಗಳ ನೇಮಕದೊಂದಿಗೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೆ ಏರಿದೆ. ಗರಿಷ್ಠ 31 ನ್ಯಾಯಮೂರ್ತಿಗಳನ್ನು ನೇಮಿಸಲು ಅವಕಾಶವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.